51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಅಧಿಸೂಚನೆಯ ಮೂಲಕ ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕಿಂತ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

- Advertisement - 

2025-26 ನೇ ಸಾಲಿನ ಮೊದಲ ಹಂತದಲ್ಲಿ, ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 9499 ವಿಷಯ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೇರ ನೇಮಕಾತಿ/ ಬಡ್ತಿ/ ವರ್ಗಾವಣೆಯ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ವರ್ಷದ ಮಾರ್ಚ್ 2026 ರ ಅಂತ್ಯದವರೆಗೆ, ಯಾವುದು ಮೊದಲೋ ಅದು, ಷರತ್ತುಗಳಿಗೆ ಒಳಪಟ್ಟು ಅತಿಥಿ ಶಿಕ್ಷಕರನ್ನು ಗೌರವಧನದ ಆಧಾರದ ಮೇಲೆ ತಾತ್ಕಾಲಿಕ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.

- Advertisement - 

ಅಧಿಸೂಚನೆ: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 51000 ಶಿಕ್ಷಕರ ಹುದ್ದೆಗಳಿಗೆ ಪ್ರತಿ ತಿಂಗಳು 12500 ರೂ.ನಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ
40000, ಸರ್ಕಾರಿ ಪ್ರೌಢಶಾಲೆಗಳಿಗೆ 11000 ಅತಿಥಿ ಶಿಕ್ಷಕರನ್ನ ನೇಮಕ ಮಾಡಲಾಗುತ್ತದೆ.

ತಾಲ್ಲೂಕು ಪಂಚಾಯತ್‌ವಾರು ಅತಿಥಿ ಶಿಕ್ಷಕರ ಹುದ್ದೆಗಳ ವಿವರಗಳನ್ನು, ಕ್ರೋಢೀಕೃತ, ಪ್ರಮಾಣೀಕೃತ (ಪಿಡಿಎಫ್ ಸ್ವರೂಪದಲ್ಲಿ), ಸ್ಕ್ಯಾನ್ ಪ್ರತಿಯನ್ನು ಆಯುಕ್ತರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಕೆ.ಆರ್. ವೃತ್ತ, ಬೆಂಗಳೂರು-01 ಇಲ್ಲಿಗೆ ಜೂನ್-20 ರೊಳಗೆ ಇಮೇಲ್ ವಿಳಾಸ: est4cpibng@gmail.com ಮೂಲಕ ಸಲ್ಲಿಸಬೇಕು.

- Advertisement - 

 

 

Share This Article
error: Content is protected !!
";