ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿಯಲ್ಲಿ ನಯಾಪೈಸೆ ಕೊಡದ ಸಚಿವೆ ನಿರ್ಮಲಾ ಸೀತರಾಮನ್: ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಶೇ ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ ನೀವು ಎಂದರು.

ಕೇಂದ್ರ ಸರ್ಕಾರಕ್ಕೆ , ಕೇಂದ್ರದ ಮಂತ್ರಿಗಳಿಗೆ ಮತ್ತು ಪ್ರಧಾನ ಮಂತ್ರಿಯವರಿಗೆ  ರಾಜ್ಯ ಸರ್ಕಾರದಿಂದ ಮೇಲಿಙದ ಮೇಲೆ ಬರೆದ ಪತ್ರಗಳ ಮಾಹಿತಿ ನೀಡಿದ ಸಿಎಂ , ಪತ್ರವನ್ನು ಸಭೆಯಲ್ಲಿ ಓದಿ ಸಂಸದರ ಗಮನ‌ಸೆಳೆದರು.

15 ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು  11495  ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಏನನ್ನೂ ಕೊಡ್ತಾ ಇಲ್ಲ.

ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ , ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ, ಆದರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾತಾಡ್ತೀರಿ ಎಂದು ಸಿಎಂ ಟೀಕಿಸಿದರು.

ನಾನೇ ಎರಡು ಬಾರಿ ಭೇಟಿ ನಿರ್ಮಲಾ ಸೀತರಾಮನ್ ಅವರಿಗೆ ಭೇಟಿ ಮಾಡಿ ಮನವಿ ಮಾಡಿದರೂ ಕೊಡಲಿಲ್ಲ. ರಾಜ್ಯದ  ಸಂಸದರು ಒಟ್ಟಾಗಿ ಇದನ್ನು ಕೊಡಿಸಲು ಯತ್ನಿಸಬೇಕು. ಇಷ್ಟು ದಿನಗಳೊಳಗೆ ನೀವು ಕೊಡಿಸಬೇಕಿತ್ತು. ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬೇಡಿ ಎಂದು ಸಿಎಂ ತಿಳಿಸಿದರು.

ರಾಜ್ಯ ಸರ್ಕಾರ ನಿರಂತರವಾಗಿ ಒಟ್ಟು 5665 ಕೋಟಿ ಪಿಂಚಣಿ ಕೊಡುತ್ತಲೇ ಬರುತ್ತದೆ.  ಆದರೆ, 559 ಕೋಟಿ ಮಾತ್ರ ಕೇಂದ್ರ ಸರ್ಕಾರ ಕೊಡುತ್ತದೆ. ಈ ಸಣ್ಣ ಮೊತ್ತವನ್ನೂ ಕೇಂದ್ರ ಸರ್ಕಾರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ ಕೇಂದ್ರ. ಇದು ಏಕೆ ಎಂದು ಪ್ರಶ್ನಿಸಿದರು.

 

 

Share This Article
error: Content is protected !!
";