ಗ್ಯಾರಂಟಿಗೆ ಪ್ರತಿ ವರ್ಷ 55 ಸಾವಿರ ಕೋಟಿಬೇಕು ಆದರೆ 1 ಲಕ್ಷ ಕೋಟಿ ಸಾಲ ಮಾಡಿದ ಕಾಂಗ್ರೆಸ್ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಹುಲ್ ಗಾಂಧಿ ಅವರೇ, ನಮ್ಮ ಕರ್ನಾಟಕಕ್ಕೆ ಸ್ವಾಗತ. ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

  1. ಕಳೆದ 3 ವರ್ಷದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 3 ಲಕ್ಷ ಕೋಟಿ ಸಾಲ ಮಾಡಿದೆ. 2. ರಾಜ್ಯದ GSDPಯಲ್ಲಿ ಸಾಲದ ಪ್ರಮಾಣ 24.91% ಆಗಿದೆ.
  2. ನಿಮ್ಮ ಗ್ಯಾರಂಟಿ ಯೋಜನೆಗೆ ಪ್ರತಿ ವರ್ಷ ಬೇಕಾಗಿರುವುದು 55 ಸಾವಿರ ಕೋಟಿ, ಕಳೆದ 3 ವರ್ಷದಿಂದ ನಿಮ್ಮ ಸರ್ಕಾರ ಮಾಡುತ್ತಿರುವ ಸಾಲ ವರ್ಷಕ್ಕೆ 1 ಲಕ್ಷ ಕೋಟಿ.
  3. ನಿಮ್ಮ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಹೇಳುತ್ತಿದ್ದಾರೆ ಎಂದು ನಿಖಿಲ್ ತೀಕ್ಷ್ಣವಾಗಿ ಪ್ರಶ್ನಿಸಿದರು.

ತಾಯಿ ಮಹಾಲಕ್ಷ್ಮಿಯು ಹಣಕಾಸು ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಸರ್ವಐಶ್ವರ್ಯ ಪ್ರಾಪ್ತಿಸಲಿ ಎಂದು ಪ್ರಾರ್ಥನೆ ಮಾಡೋಣ ಎಂದು ನಿಖಿಲ್ ವ್ಯಂಗ್ಯವಾಡಿದ್ದಾರೆ.

- Advertisement - 

 

- Advertisement - 
Share This Article
error: Content is protected !!
";