ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅನ್ನಭಾಗ್ಯ ಯೋಜನೆಯಲ್ಲಿ ಕೊಡುತ್ತಿರುವ 5 ಕೆ.ಜಿ ಅಕ್ಕಿ ಕೇಂದ್ರ ಸರ್ಕಾರದ್ದು. ʼ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬರಿಗೂ 10 ಕೆಜಿ ಕೊಡುತ್ತೇನೆ ಎಂದು ಹೇಳಿತ್ತು. ಅದರಂತೆ 15 ಕೆ.ಜಿ. ಅಕ್ಕಿ ಕೊಡಬೇಕಿತ್ತು ಎಂದು ಜೆಡಿಎಸ್ ಎಚ್ಚರಿಸಿದೆ.
ಢೋಂಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ 10 ಕೆ.ಜಿ. ಅಕ್ಕಿಯನ್ನು ನೀಡಿಲ್ಲ. ಹಣವನ್ನು ಕೊಡದೆ ರಾಜ್ಯದ ಜನರಿಗೆ ಟೋಪಿ ಹಾಕುತ್ತಿದ್ದಾರೆ ಎಂದು ಜೆಡಿಎಸ್ ಟೀಕಿಸಿದೆ.
3 ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ 2000 ದುಡ್ಡೂ ಇಲ್ಲ, ಯುವನಿಧಿ ಬರೀ ಘೋಷಣೆಗಷ್ಟೇ ಸೀಮಿತವಾಗಿದ್ದು ತಾಂತ್ರಿಕ ಸಮಸ್ಯೆಯಲ್ಲೇ ಸರ್ಕಾರ ಮುಳುಗಿದೆ.
ಅಂಗೈನಲ್ಲಿ ಆಕಾಶ ತೋರಿಸಿರುವ ಕಾಂಗ್ರೆಸ್‌ಸರ್ಕಾರದ ಯೋಗ್ಯತೆಗೆ ಒಂದು ಗ್ಯಾರಂಟಿಯನ್ನು ಸರಿಯಾದ ಸಮಯಕ್ಕೆ ತಲುಪಿಸಲು ಸಾಧ್ಯವಾಗಿಲ್ಲ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.