ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕಂಟೈನರ್ ಲಾರಿ, ಖಾಸಗಿ ಸೀಬರ್ಡ್ ಬಸ್ ಮತ್ತು ಶಾಲಾ ಮಕ್ಕಳ ಪ್ರವಾಸದ ಬಸ್ ಅಪಘಾತದಲ್ಲಿ 6 ಮಂದಿ ಸುಟ್ಟು ಕರಕಲಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಸಮೀಪದ ಗೊರ್ಲಡಕು ಬಳಿಯ ಬಳಿ NH-48 ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ.
ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಕಂಟೈನರ್ ಲಾರಿ ಚಾಲಕ ಸೇರಿದಂತೆ ಖಾಸಗಿ ಬಸ್ಸಿನಲ್ಲಿದ್ದ 5 ಮಂದಿ ಸಾವನ್ನಪ್ಪಿ, 13ಕ್ಕೂ ಹೆಚ್ಚಿನವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತವು ಬೆಳಗಿನ ಜಾವ 1.45 ಗಂಟೆ ಸುಮಾರಿಗೆ ಸಂಭವಿಸಿದೆ.
ಡಿಸೆಂಬರ್ 25ರ ಗುರುವಾರ ಮುಂಜಾನೆ ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಎದುರಿನಿಂದ ಬಂದ ಟ್ರಕ್ ಡಿವೈಡರ್ (ಭೀಕರ ಅಪಘಾತ) ಜಿಗಿದು ಬಂದು ಡಿಕ್ಕಿ ಹೊಡೆದಿದೆ.
ಡಿಕ್ಕಿಯಾದ ತಕ್ಷಣ ಬಸ್ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಖಾಸಗಿ ಬಸ್ಸಿನಲ್ಲಿ ಒಟ್ಟು 32 ಮಂದಿ ಪ್ರಯಾಣಿಸುತ್ತಿದ್ದು 28 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಈ ಬಸ್ಸಿಗೆ ಡಿಕ್ಕಿ ಹೊಡೆದು ಕಂಟೈನರ್ ಲಾರಿ ಚಾಲಕ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾನೆ.
ಈ ದುರ್ಘಟನೆಯಲ್ಲಿ ತಾಯಿ ಬಿಂದು ಮತ್ತು 5 ವರ್ಷದ ಪುತ್ರಿ ಗ್ರೇಯಾ, ಎ.ಎಂ ನವ್ಯಾ, ಹೆಚ್.ಸಿ ಮಾನಸ, ರಶ್ಮಿ, ಕಂಟೈನರ್ ಲಾರಿ ಚಾಲಕ ಕುಲದೀಪ್ ಯಾದವ್ ಸಾವನ್ನಪ್ಪಿದ್ದಾರೆ. ಸ್ಥಳಕೆ ಐಜಿಪಿ ರವಿಕಾಂತೇಗೌಡ, ಎಸ್ಪಿ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

