ಶೇ. 60ರಷ್ಟು ಕಾಂಗ್ರೆಸ್ ಸರ್ಕಾರದ ಕಮಿಷನ್ ದಂಧೆ ಮತ್ತೊಮ್ಮೆ ಸಾಬೀತು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶೇ. 60ರಷ್ಟು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕಮಿಷನ್ ದಂಧೆ ಮತ್ತೊಮ್ಮೆ ಸಾಬೀತಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

ಭೋವಿ ನಿಗಮದಲ್ಲಿ ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದವರಿಗೆ 25 ಲಕ್ಷ ಸಹಾಯಧನ ಬಿಡುಗಡೆ ಮಾಡಲು ಭೋವಿ ನಿಗಮದ‌ಅಧ್ಯಕ್ಷ ರವಿಕುಮಾರ್ 5 ಲಕ್ಷ ಕಮಿಷನ್ ಪಡೆಯುತ್ತಿದ್ದಾನೆ. 

- Advertisement - 

ರಾಜ್ಯ ಸರ್ಕಾರ ಕೂಡಲೇ ಭ್ರಷ್ಟ ಅಧ್ಯಕ್ಷನನ್ನು ವಜಾ ಮಾಡಿ, ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಬೇಕು‌‌ಎಂದು ಜೆಡಿಎಸ್ ಪಕ್ಷವು ಆಗ್ರಹಿಸುತ್ತದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಹಗರಣ ನಡೆಸಿದ್ದ ಭ್ರಷ್ಟ ಸರ್ಕಾರ, ಬಳಿಕ  SCSP/ TSP ನಿಧಿಯಲ್ಲಿನ ಸಾವಿರಾರು ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡು ಪರಿಶಿಷ್ಟರಿಗೆ ದ್ರೋಹ ಬಗೆದಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ದಲಿತರ ಬೆನ್ನಿಗೆ ಚೂರಿ ಹಾಕಿದೆ. ದಲಿತ ವಿರೋಧಿ ಸಿದ್ದರಾಮಯ್ಯ ಸರ್ಕಾರದ ದುರಾಡಳಿತ ಮಿತಿಮೀರಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

- Advertisement - 

 

Share This Article
error: Content is protected !!
";