ಶೇ.60ರಷ್ಟು ಕಮಿಷನ್ ಆರೋಪ‌ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಶೇ.60ರಷ್ಟು ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ‌ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದಾವಣಗೆರೆಯ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಸಿಎಂ ತಿಳಿಸಿದರು.

ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವುದು ಇದು ಮೊದಲಲ್ಲ. ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ. ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು.

ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು. ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಸಚಿವರಾದ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಇತರೆ ಸಚಿವರು ಊಟಕ್ಕೆ ಸೇರುವುದೇ ತಪ್ಪೇ? ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

 

- Advertisement -  - Advertisement - 
Share This Article
error: Content is protected !!
";