ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಡಾ. ಎಪಿಜೆ ಅಬ್ದುಲ್ ಕಲಾಂ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಏ.27 ರಂದು ಬೆಳಿಗ್ಗೆ 11 ರಿಂದ ಜರುಗುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರವು ಇಲಾಖಾ ವೆಬ್ಸೈಟ್ನಲ್ಲಿ ಲಭ್ಯವಿದ್ದು, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳುವಂತೆ ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು.
ಇಲಾಖಾ ವೆಬ್ಸೈಟ್: https://dom.karnataka.gov.in ಅಥವಾ https://dom.karnataka.gov.in/new-page/online%20Application/en ಈ ಲಿಂಕ್ನಲ್ಲಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.