ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳ 2025-26ನೇ ಸಾಲಿನ 6ನೇ ತರಗತಿಯ ವಿದ್ಯಾರ್ಥಿಗಳ 5ನೇ ಸುತ್ತಿನ ಸೀಟು ಹಂಚಿಕೆ ಕೌನ್ಸಿಲಿಂಗ್ ಕಾರ್ಯಕ್ರಮವನ್ನು ಇದೇ ಜುಲೈ 21ರಂದು ಬೆಳಿಗ್ಗೆ 10 ಗಂಟೆಯಿಂದ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಪಕ್ಕದ ಕ್ರೀಡಾ ಭವನದಲ್ಲಿ ನಡೆಸಲಾಗುವುದು.
5ನೇ ಸುತ್ತಿನ ಆಯ್ಕೆ ಪಟ್ಟಿ ಹಾಗೂ ಕಟ್ ಆಫ್ ಅಂಕಗಳ ವಿವರವನ್ನು ಎಲ್ಲಾ ಎಲ್ಲಾ ವಸತಿ ಶಾಲೆಗಳಲ್ಲಿ ಪ್ರಕಟಿಸಲಾಗಿದ್ದು, ಕಟ್ ಆಫ್ ಅಂಕಗಳ ಮೇಲಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಪರೀಕ್ಷಾ ಪ್ರವೇಶ ಪತ್ರ, ಜಾತಿ-ಆದಾಯ ಪ್ರಮಾಣ ಪತ್ರ, ವಿಶೇಷ ವರ್ಗಕ್ಕೆ ಸೇರಿದ್ದಲ್ಲಿ ಸಂಬಂಧಪಟ್ಟ ಪ್ರಮಾಣ ಪತ್ರ ಹಾಗೂ ವಿದ್ಯಾರ್ಥಿ ಆಧಾರ್ ಕಾರ್ಡ್ ಮೂಲ ಪ್ರತಿಗಳೊಂದಿಗೆ ಹಾಜರಾಗಲು ಸೂಚಿಸಿದೆ.
ಜುಲೈ 21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ವಿಶೇಷ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಮಧ್ಯಾಹ್ನ 2 ರಿಂದ 4 ರವರೆಗೆ ಇತರೆ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಯಲಿದೆ. ಅಭ್ಯರ್ಥಿಗಳಿಗೆ ಮೀಸಲಾತಿ ಹಾಗೂ ಮೆರಿಟ್ ಅನುಸಾರ ಖಾಲಿ ಇರುವ ಸ್ಥಾನಗಳಿಗೆ ಕೌನ್ಸಿಲಿಂಗ್ ಮೂಲಕ ಪ್ರವೇಶ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಪೋಷಕರು ತಮಗೆ ಸಮೀಪವಿರುವ ಕ್ರೈಸ್ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಎಂದು ವಸತಿ ಶಾಲೆಗಳ ದಾಖಲಾತಿ ಸಮಿತಿ ಅಧ್ಯಕ್ಷರು ಹಾಗೂ ಚಿತ್ರದುರ್ಗ ಉಪವಿಭಾಗ ಸಹಾಯಕ ಆಯುಕ್ತರು ತಿಳಿಸಿದ್ದಾರೆ.