ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ. ಮಾಜಿ ಪ್ರಧಾನಿ ನಿಧನ ಹೊಂದಿದ್ದು ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಇಂದು (ಡಿ.27) ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹೊಂದಿದ್ದು ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಎಲ್ಲಾ ಕಾರ್ಯಕ್ರಮಗಳನ್ನು ಈಗಾಗಲೇ ರದ್ದು ಮಾಡಲಾಗಿದೆ. ಕಾರ್ಯಕ್ರಮ ರದ್ದು ಮಾಡುತ್ತಿದ್ದಂತೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇತರರು ಬೆಳಗಾವಿಯಿಂದ ದೆಹಲಿಗೆ ತೆರಳಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ-
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಡಿಸಿಎಂ ಡಿಕೆ ಶಿವಕುಮಾರ್ ಅವರು, ಮನಮೋಹನ್ ಸಿಂಗ್ ಕೊಡುಗೆ ಮರೆಯಲು ಸಾಧ್ಯವಿಲ್ಲ. ನಾಳೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ರದ್ದು ಮಾಡಲಾಗಿದೆ.
ವರಿಷ್ಠರ ಜೊತೆ ಚರ್ಚಿಸಿ ಮುಂದೆ ಕಾರ್ಯಕ್ರಮ ಮಾಡುತ್ತೇವೆ. ಡಿ.27ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಒಂದು ವಾರ ಶೋಕಾಚರಣೆ ಆಚರಿಸಲಾಗುತ್ತದೆ. ನಾಳೆ ನಾನು, ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು ದೆಹಲಿಗೆ ಹೋಗುವುದಾಗಿ ಅವರು ಮಾಹಿತಿ ನೀಡಿದ್ದಾರೆ.