700 ಕೋಟಿ ಲೂಟಿ, ಮೋದಿ ಅವರು ಸುಳ್ಳು ಆರೋಪ ಮಾಡಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿಸಿಎಂ ಡಿ.ಕೆ.ಶಿವಕುಮಾರ್
ಅವರು ಹಾಗು ಗೃಹ ಸಚಿವ ಡಾ.ಪರಮೇಶ್ವರ್  ಅವರು ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂಪಾಯಿ ಲೂಟಿ ಆಗಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಆರೋಪ ಮಾಡಿದ್ದಾರೆ ಎಂದು ಹಸಿ ಸುಳ್ಳು ಹೇಳಿದ್ದಾರೆಂದು ಸಮರ್ಥಿಸಿಕೊಂಡಿದ್ದಾರೆಂದು ವಿಪಕ್ಷ ನಾಯಕ ಆರ್.ಅಶೋಕ್ ಟ್ವೀಟ್ ಮಾಡಿ ಹರಿಹಾಯ್ದಿದ್ದಾರೆ.

ಸ್ವಾಮಿ ಡಿ.ಕೆ.ಶಿವಕುಮಾರ್ ಹಾಗೂ ಪರಮೇಶ್ವರ್ ಅವರೇ, ಅದು ಪ್ರಧಾನಿ ಮೋದಿ ಅವರು ಮಾಡಿರುವ ಆರೋಪವಲ್ಲ. ಕರ್ನಾಟಕ ರಾಜ್ಯ ಮದ್ಯ ಮಾರಾಟಗಾರರ ಸಂಘ ಮಾಡಿರುವ ಆರೋಪ.

ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಮದ್ಯ ಮಾರಾಟಗಾರರ ಸಂಘ ಬರೆದಿರುವ ಪತ್ರವನ್ನ ಒಮ್ಮೆ ತರಿಸಿಕೊಂಡು ಓದಿ. ಲೈಸೆನ್ಸ್ ನವೀಕರಣಕ್ಕೆ ರೇಟೇಷ್ಟು, ಮಂಥ್ಲಿ ಮನಿ ಹೆಸರಿನಲ್ಲಿ ಪ್ರತಿ ಮದ್ಯದ ಅಂಗಡಿಯಿಂದ ಎಷ್ಟು ವಸೂಲಿ ಆಗುತ್ತಿದೆ, ಅಬಕಾರಿ ಇಲಾಖೆಯ ಟ್ರಾನ್ಸಫರ್ ದಂಧೆಯಲ್ಲಿ ಯಾವ ಮಟ್ಟದ ಅಧಿಕಾರಿಗೆ ಎಷ್ಟು ಲಂಚ ಎಂದು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಅದನ್ನ ಮಾಧ್ಯಮಗಳು ವರದಿ ಮಾಡಿವೆ. ಇದನ್ನೇ ಪ್ರಧಾನಿ ಮೋದಿ ಅವರು ಮಹಾರಾಷ್ಟ್ರದಲ್ಲಿ ಹೇಳಿದ್ದಾರೆಯೇ ಹೊರತು ಅವರು ಯಾವುದೇ ಸುಳ್ಳು ಆರೋಪ ಮಾಡಿಲ್ಲ ಎಂದು ಅಶೋಕ್ ಟೀಕಿಸಿದ್ದಾರೆ.

ಇಷ್ಟಕ್ಕೂ ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ATM ಆಗಿದೆ ಎನ್ನುವುದಕ್ಕೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗಾರಣಕ್ಕಿಂತ ಸಾಕ್ಷಿ ಬೇಕೆ? ತೆಲಂಗಾಣದ ಯಾವ್ಯಾವ ಮದ್ಯದ ಅಂಗಡಿಗಳಿಗೆ, ಆಭರಣ ಮಳಿಗೆಗಳಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಹೋಗಿದೆ ಎನ್ನುವುದು ಜಗಜ್ಜಾಹೀರಾಗಿದೆ.

ಸಿಬಿಐ ಮತ್ತು ಇ.ಡಿ. ತನಿಖೆಯಲ್ಲಿ ಎಲ್ಲವೂ ಬಹಿರಂಗವಾಗಲಿದೆ. ತಮ್ಮ ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನ ಲೂಟಿ ಹೊಡೆಯುತ್ತಿರುವ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ಮೋದಿ ಅವರ ಬಗ್ಗೆ ಮಾತನಾಡಲು ಯಾವ ನೈತಿಕತೆಯೂ ಇಲ್ಲ ಎಂದು ಅಶೋಕ್ ತಿರುಗೇಟು ನೀಡಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";