ಪಶುವೈದ್ಯ ಇಲಾಖೆಯ 700 ಗ್ರೂಪ್ ‘ಡಿ’ ಹುದ್ದೆ ಭರ್ತಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಪಶುವೈದ್ಯ ಇಲಾಖೆಯಲ್ಲಿ ಒಟ್ಟು 18563 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ 8151 ಅಧಿಕಾರಿ/ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಉಳಿದಂತೆ ಒಟ್ಟು 10412 ಹುದ್ದೆಗಳು ಖಾಲಿ ಇವೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ತಿಳಿಸಿದರು.

ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆ ಸದಸ್ಯರಾದ ಎಂ. ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಸಚಿವರು ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ವಿಳಂಬವಾಗಬಹುದಾದ ಹಿನ್ನಲೆಯಲ್ಲಿ ಹಾಲಿ 400 ಪಶುವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಈಗಾಗಲೇ 360 ಪಶು ವೈದ್ಯಾಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಿರುತ್ತಾರೆ.

ಕಲ್ಯಾಣ ಕರ್ನಾಟಕ 371 ಜೆ ಯಡಿ 32 ಪಶು ವೈದ್ಯಕೀಯ ಪರೀಕ್ಷಕರ ಹುದ್ದೆಗಳಿಗೆ ವಿಶೇಷ ನೇಮಕಾತಿ ನಿಯಮದ ಮೂಲಕ ಅರ್ಹ 32 ಅಭ್ಯರ್ಥಿಗಳಿಗೆ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಿ 27 ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡಲಾಗಿದೆ.
ಖಾಲಿ ಇರುವ ಗ್ರೂಪ್ ಡಿವೃಂದದ 2641 ಹೊರ ಗುತ್ತಿಗೆ ನೌಕರರನ್ನು ಭರ್ತಿ ಮಾಡಲಾಗಿದೆ ಹಾಗೂ ಖಾಲಿ ಇರುವ ಗ್ರೂಪ್ ಡಿವೃಂದದ ಹುದ್ದೆಗಳಿಗೆದುರಾಗಿ 700 ಹುದ್ದೆಗಳಿಗೆ ಮಂಜೂರಾತಿ ದೊರೆತಿದ್ದು ಮುಂದಿನ ಆರ್ಥಿಕ ವರ್ಷದಲ್ಲಿ ನೇಮಕಾತಿ ಮಾಡಿಕೊಳ್ಳಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

 

Share This Article
error: Content is protected !!
";