ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ಶಾಸಕರು ಹಾಗೂ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ತ್ರಿವರ್ಣ ಧ್ವಜಾರೋಹಣ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್, ಮಾಜಿ ಶಾಸಕ ಎಂ.ಎಸ್. ನಾರಾಯಣರಾವ್, ಆರ್. ಚೌಡರೆಡ್ಡಿ ತೂಪಲ್ಲಿ, ಕೆ.ಎಸ್.ಆರ್.ಟಿ.ಸಿ ಮಾಜಿ ಅಧ್ಯಕ್ಷ ಟಿ.ಪ್ರಭಾಕರ್, ಬೆಂಗಳೂರು ನಗರ ಉಸ್ತುವಾರಿ ಜಗದೀಶ್ ನಾಗರಾಜಯ್ಯ, ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್, ನಗರ ಘಟಕದ ಮಾಜಿ ಅಧ್ಯಕ್ಷ ಆರ್.ಪ್ರಕಾಶ್,
ರಾಜ್ಯ ಸೇವಾ ದಳ ಅಧ್ಯಕ್ಷ ಬಸವರಾಜ್ ಪಾದಯಾತ್ರಿ, ನಗರ ಕಾರ್ಯಾಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಮಹಾ ಪ್ರಧಾನ ಕಾರ್ಯದರ್ಶಿ ಎಸ್.ರಮೇಶ, ನಗರ ಸೇವಾ ದಳ ವಿಭಾಗದ ಅಧ್ಯಕ್ಷ ಪಿ.ಮಹೇಶ್, ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ಎ.ಎಂ.ಪ್ರವೀಣ್ ಕುಮಾರ್ ಸೇರಿದಂತೆ ಬೆಂಗಳೂರು ನಗರ ವಿಭಾಗಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

