8 ಸಾವಿರ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ, ಬೆಳೆಗಾರರಿಗೆ ಸಂತಸದ ಸುದ್ದಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಭಂದಿಸಿದಂತೆ
, ಕೇಂದ್ರ ಸರ್ಕಾರದ ಬೆಂಬಲ ಬೆಲೆ ರೂ.7,550/- ರ ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ ರೂ.450/- ಪ್ರತಿ ಕ್ವಿಂಟಾಲಗೆ, ಸೇರಿ ಒಟ್ಟು ರೂ.8,000/- ಪ್ರತಿ ಕ್ವಿಂಟಾಲ ರಂತೆ ತೊಗರಿ ಖರೀದಿಸಲು ಜವಳಿ, ಕಬ್ಬು ಅಭಿವೃಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು  ಶಿವಾನಂದ ಪಾಟೀಲ್ ಅವರು ಕಳೆದ ಜನವರಿ ಮಾಹೆಯಲ್ಲಿ ಭರವಸೆ ನೀಡಿದ್ದರು.

ಈ ಸಂಬಂಧ ಮಾನ್ಯ ಮುಖ್ಯ ಮಂತ್ರಿಗಳು ಅನುಮೋದನೆ ನೀಡಿದ್ದುಆರ್ಥಿಕ ಇಲಾಖೆಯೂ ಸಹ ಸಹಮತಿ ನೀಡಿದೆ. ಈ ಕುರಿತು ಸಂಭದಿಸಿದ ಇಲಾಖೆಗೆ ತಕ್ಷಣದಿಂದ ಅಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.

ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳು ಪ್ರಾರಂಭಿಸಲಾಗಿದ್ದು, ರೈತ ಬಾಂಧವರು ತಮ್ಮ ಹತ್ತಿರದ PACS / FPO / TAPCMS ಗಳಿಗೆ ಭೇಟಿ ನೀಡಿ ನೊಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸುದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

 

 

Share This Article
error: Content is protected !!
";