9 ಕೋಟಿ ವೆಚ್ಚದಲ್ಲಿ ಚಲನಚಿತ್ರೋತ್ಸ ಆಯೋಜನೆ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು:

* 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್‌1ರಿಂದ 8ರ ವರೆಗೆ ನಡೆಯಲಿದೆ.

  • ಈ ವರ್ಷದ ಚಲನಚಿತ್ರೋತ್ಸವದ ಥೀಮ್‌ʻಸರ್ವ ಜನಾಂಗದ ಶಾಂತಿಯ ತೋಟʼ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್‌ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು.
  • 2006ರಲ್ಲಿ ಆರಂಭವಾದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇದೀಗ 16ನೇ ಆವೃತ್ತಿಗೆ ಪ್ರವೇಶಿಸುತ್ತಿದೆ.
  • 9 ಕೋಟಿ ವೆಚ್ಚದಲ್ಲಿ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ.
  • ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದ್ದು, ಬೆಂಗಳೂರು ಭಾರತೀಯ ಮತ್ತು ಅಂತಾರಾಷ್ಟ್ರೀಯ ಸಿನೆಮಾ ಸಂಸ್ಕೃತಿಯ ಮುಖ್ಯಕೇಂದ್ರವಾಗಿ ಬೆಳೆದಿದೆ.
  • ಚಲನಚಿತ್ರೋತ್ಸವದಲ್ಲಿ ಪ್ರತಿ ವರ್ಷ 60ಕ್ಕೂ ದೇಶಗಳಿಂದ ಬಂದ ಸುಮಾರು 200ಕ್ಕೂ ಅಧಿಕ ಚಲನಚಿತ್ರಗಳನ್ನು, 13 ಚಿತ್ರಮಂದಿರಗಳಲ್ಲಿ, ಸುಮಾರು 400 ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ.
  • ಪ್ರತಿ ಆವೃತ್ತಿಯಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";