ಭೀಕರ ಅಪಘಾತ 9 ಮಂದಿ ದಾರುಣ ಸಾವು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯದಲ್ಲಿ ಶನಿವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 9 ಮಂದಿ ದಾರುಣವಾಗಿ ಸಾವು ಕಂಡಿರುವ ಘಟನೆ ಜರುಗಿದೆ.

ನೆಲಮಂಗಲ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉದ್ಯಮಿ ಸೇರಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದರೆ, ಇತ್ತ ಮಂಡ್ಯ ಜಿಲ್ಲೆಯಲ್ಲಿ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಳವಳ್ಳಿ ತಾಲೂಕಿನ ಬೋಸೇಗೌಡನ ದೊಡ್ಡಿ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನ ಕಾಲೇಜ್ ವಿದ್ಯಾರ್ಥಿಗಳಾದ ಪ್ರಣವ್, ಆಕಾಶ್, ಆದರ್ಶ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಪೃಥ್ವಿ ಎಂಬ ಮತ್ತೊಬ್ಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರು ಜಿಲ್ಲೆ ತಲಕಾಡು ಪ್ರವಾಸಕ್ಕೆ ಮೃತ ವಿದ್ಯಾರ್ಥಿಗಳು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಬಸ್ ಓವರ್ ಟೇಕ್ ಮಾಡುವಾಗ ಎದುರಿಗೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.

ಮೃತದೇಹಗಳನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು ಪರಿಹಾರ ಕಾರ್ಯಗಳನ್ನು ಪೊಲೀಸರು ಮಾಡಿದ್ದಾರೆ.

- Advertisement -  - Advertisement - 
Share This Article
error: Content is protected !!
";