ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮ್ಮ ಸಂಘಟನೆಯ ಬಲವರ್ಧನೆ ನಿಟ್ಟಿನಲ್ಲಿ ನಡೆಸಲಾಗುತ್ತಿರುವ ಜಿಲ್ಲಾವಾರು ವಿಶೇಷ ಸಭೆಯಲ್ಲಿ ಚಿತ್ರದುರ್ಗ, ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಗಳ ಪದಾಧಿಕಾರಿಗಳೊಂದಿಗೆ ವಿಸ್ತೃತ ಸಮಾಲೋಚನೆ ನಡೆಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ನಮ್ಮ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ನಿಷ್ಠೆ, ಉತ್ಸಾಹ ಹಾಗೂ ಸಕ್ರಿಯತೆಗಳೆ ಪಕ್ಷದ ಶಕ್ತಿ. ತಳಮಟ್ಟದಿಂದ ಪಕ್ಷವನ್ನು ಮತ್ತಷ್ಟು ಸಂಘಟಿಸಿ, ಜನಸೇವೆಯ ಸಂಕಲ್ಪದೊಂದಿಗೆ ನಾವೆಲ್ಲರೂ ಒಂದಾಗಿ ಮುನ್ನಡೆಯುತ್ತಿದ್ದೇವೆ.
ಸಭೆಯಲ್ಲಿ ಹಿರಿಯ ನಾಯಕರು, ಪಕ್ಷದ ಸಂಸದೀಯ ಮಂಡಳಿ ಸದಸ್ಯರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ್, ನಂದೀಶ್ ರೆಡ್ಡಿ, ಪ್ರೀತಂಗೌಡ, ಪಕ್ಷದ ಕೋಶಾಧ್ಯಕ್ಷ ಸುಬ್ಬು ನರಸಿಂಹ, ಕೆ.ಎಸ್ ನವೀನ್, ಮೂರು ಜಿಲ್ಲೆಗಳ ಜಿಲ್ಲಾಧ್ಯಕ್ಷರುಗಳು ಸೇರಿದಂತೆ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

