ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿಂದಿನ ಮನರೇಗಾ ಯೋಜನೆಯ ಗಂಭೀರ ಲೋಪದೋಷಗಳನ್ನು ಸರಿಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪ, ದೂರದೃಷ್ಟಿಯಿಂದ ಜಾರಿಗೆ ಬಂದಿರುವ ಯೋಜನೆಯೇ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ)‘ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉತ್ತು ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಬೆಂಗಳೂರಿನಲ್ಲಿ ಬಿಜೆಪಿ-ಜೆಡಿಎಸ್ ಎನ್ ಡಿಎ ನಾಯಕರೊಂದಿಗೆ ಜಂಟಿ ಮಾಧ್ಯಮಗೋಷ್ಠಿ ನಡೆಸಿ ಅವರು ಮಾತನಾಡಿದರು.
ಸುಧಾರಿತ ಈ ಯೋಜನೆಯ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ನಡೆಸುತ್ತಿರುವ ಸಲ್ಲದ ಅಪಪ್ರಚಾರದ ವಿರುದ್ಧ ಎನ್ ಡಿಎ ಎದುರಾಳಿಗಳಿಗೆ ದಿಟ್ಟ ಉತ್ತರ ನೀಡಲಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ಪ್ರತಿಪಕ್ಷ ನಾಯಕ ಆರ್. ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಮಂತ್ರಿಗಳಾದ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಎ. ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ, ರಾಜ್ಯ ಬಿಜೆಪಿ ವಕ್ತಾರ ಡಾ.ಅಶ್ವತ್ಥನಾರಾಯಣ ಅವರು ಸೇರಿ ಜೆಡಿಎಸ್- ಬಿಜೆಪಿ ಪಕ್ಷಗಳ ಅನೇಕ ನಾಯಕರು ಉಪಸ್ಥಿತರಿದ್ದರು.

