ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿದ್ದರಾಮಯ್ಯ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಮಂಗಳೂರು:
ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ . ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಗಳೂರಿನಲ್ಲಿ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ-2026″ ಅನ್ನು ಉದ್ಘಾಟಿಸಿ, ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿ, ಬಳಿಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿಪಡಿಸಿದ “ಪಿಲಿಕುಳ ರೆಸಾರ್ಟ್” ಅನ್ನು ಲೋಕಾರ್ಪಣೆಗೊಳಿಸಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

- Advertisement - 

ಬಿಜೆಪಿ ಪಾದಯಾತ್ರೆ ಏಕೆ ಕೈಗೊಳ್ಳಬೇಕು:
ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ನಾವು ಹಿಂದೆ ಪಾದಯಾತ್ರೆ ಮಾಡಿದ್ದು, ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು  ಸವಾಲು ಹಾಕಿದ್ದರು. ಅದಕ್ಕಾಗಿ ಪಾದಯಾತ್ರೆ ಕೈಗೊಳ್ಳಲಾಯಿತು. ಇವರು ಪಾದಯಾತ್ರೆ ಏಕೆ ಮಾಡಬೇಕು ಎಂದು ಪ್ರಶ್ನಿಸಿದರು.

ಬ್ಯಾನರ್ ತೆಗೆದದ್ದು ಬಳ್ಳಾರಿ ಘಟನೆಗೆ ಪ್ರಚೋದನೆ:
ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ ಪ್ರಚೋದನೆ ಆಯಿತು ಎಂದರು.
ಜನಾರ್ದನ ರೆಡ್ಡಿ , ಶ್ರೀರಾಮುಲು ಅವರು ಸ್ಥಾನ ಕಳೆದುಕೊಂಡಿದ್ದರಿಂದ ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದರು.

- Advertisement - 

ಕುರ್ಚಿ ಕಾಳಗವಿಲ್ಲ:
ಮುಖ್ಯಮಂತ್ರಿ ಕುರ್ಚಿ ಬಗ್ಗೆ ಕಾಳಗವೇ ಇಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದು ಮುಖ್ಯಮಂತ್ರಿಗಳು ಹೇಳಿದರು.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಅಶೋಕ್ ರೈ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು ಮತ್ತು ಸ್ಥಳೀಯ ಜನಪ್ರತಿ‌ನಿಧಿಗಳು ಉಪಸ್ಥಿತರಿದ್ದರು.‌

 

Share This Article
error: Content is protected !!
";