ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಜಿಲ್ಲಾ ಯುವ ಸಂಘಟನೆಗಳ ಒಕ್ಕೂಟ, ಜೈ ಹಿಂದ್ ಪ್ರತಿಷ್ಠಾನ , ಋಗ್ವೇದಿ ಯೂತ್ ಕ್ಲಬ್ ,ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು , ಶ್ರೀಗಂಧ ಕನ್ನಡ ಯುವ ವೇದಿಕೆ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನ ಅಂಗವಾಗಿ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮವನ್ನು 12ರ ಸೋಮವಾರ ಬೆಳಿಗ್ಗೆ 8ಕ್ಕೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಪ್ರಕಾಶ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಸಂಘಟನೆಗಳ ಒಕ್ಕೂಟದ ಕಾರ್ಯದರ್ಶಿ ಸುರೇಶ್ ದೊಡ್ಡ ಮೋಳೆ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಬಿಕೆ ಆರಾಧ್ಯ ತಿಳಿಸಿದ್ದಾರೆ.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಮುಖ್ಯ ಸಂಚಾಲಕಿ ಬಿಕೆ ದಾನೇಶ್ವರಿ ಅಕ್ಕರವರು ಅಧ್ಯಕ್ಷತೆ ವಹಿಸಲಿದ್ದಾರೆ.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಹಾಗೂ ಯುವ ಮುಖಂಡ ಬಿ ಕೆ ರವಿಕುಮಾರ್ ಉದ್ಘಾಟಿಸಲಿದ್ದಾರೆ.
ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ, ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಎನ್ ಋಗ್ವೇದಿ ವಿವೇಕಾನಂದರ ಕುರಿತು ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿವಿಧ ಸಂಘಟನೆಗಳ ಅಧ್ಯಕ್ಷರು ಆಗಮಿಸಲಿದ್ದಾರೆ. ವಿವೇಕಾನಂದ ಜಯಂತಿ ಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜಯಂತಿಯವರಿಗೆ ಜನವರಿ-12 ಸೋಮವಾರದಿಂದ 23 ರವರೆಗೆ ಶ್ರೀ ವಿವೇಕ – ನೇತಾಜಿ ಜೈ ಹಿಂದ್ ಅಭಿಯಾನವನ್ನು ವಿವಿಧ ಕಡೆ ಹಮ್ಮಿಕೊಳ್ಳಲಾಗಿದೆ.
ಸೋಮವಾರಪೇಟೆ, ಹರದನಹಳ್ಳಿ, ಬಂಡಿಗೆರೆ, ಅಮಚವಾಡಿ, ಚನ್ನಪ್ಪನಪುರ, ತಾವರಕಟ್ಟೆ ಮೋಳೆ, ದೊಡ್ಡ ಮೋಳೆ,ಚಿಕ್ಕ ಮೋಳೆ ಬ್ಯಾಡಮೂಡಲು, ರಾಮಸಮುದ್ರ, ಮೂಡಲಪುರ, ಉತ್ತವಳ್ಳಿ ಮತ್ತು ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಸ್ಥಳೀಯ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರೂಪಿಸಲಾಗಿದೆ ಎಂದು ಸುರೇಶ್, ರವಿಚಂದ್ರ ಪ್ರಸಾದ್ ಹಾಗೂ ಬಿ ಕೆ ಆರಾಧ್ಯ ತಿಳಿಸಿದ್ದಾರೆ.

