ಬಿ-ಖಾತಾದಿಂದ ಎ-ಖಾತಾಗೆ ಆಸ್ತಿ ನೋಂದಣಿ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿ-ಖಾತಾ ಆಸ್ತಿ ದಾಖಲೆಗಳ ಎ-ಖಾತಾ ಪರಿವರ್ತನೆಗೆ ನವೆಂಬರ್ 1 ರಿಂದ ಇ- ಖಾತಾ ಹೊಂದಿರುವುದು ಅಗತ್ಯ ಎಂದು ಜಿಬಿಎ ಹೇಳಿತ್ತು.

ಈ ಹಿನ್ನೆಲೆ ರಾಜ್ಯದಲ್ಲಿ ಆಸ್ತಿ ನೋಂದಣಿ ಹಾಗೂ ರಿಯಲ್ ಎಸ್ಟೇಟ್ ವಹಿವಾಟುಗಳಲ್ಲಿ ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಎ-ಖಾತಾ ನೀಡುವ ಪ್ರಕ್ರಿಯೆಗೆ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸಿದೆ.
ಈ ನಿಯಮಗಳು ವಿಶೇಷವಾಗಿ ಬಿ-ಖಾತಾ ಹೊಂದಿರುವ ಅನುಮೋದಿತ ಅಪಾರ್ಟ್‌ಮೆಂಟ್ ಕಾಂಪ್ಲೆಕ್ಸ್​ಗಳಿಗೆ ಮಹತ್ವದ್ದಾಗಿವೆ.

- Advertisement - 

ಎ-ಖಾತಾಗೆ ಅರ್ಜಿ-
ಅನುಮೋದಿತ ಲೇಔಟ್‌ಗಳು ಹಾಗೂ ಅನುಮೋದಿತ ಕಟ್ಟಡಗಳಲ್ಲಿನ ಫ್ಲಾಟ್ ಮಾಲೀಕರು ಈಗ ಎ-ಖಾತಾಗೆ ಅರ್ಜಿ ಸಲ್ಲಿಸಬಹುದು. ಆದರೆ ಅದಕ್ಕೂ ಮೊದಲು ಪ್ರತಿಯೊಬ್ಬ ಫ್ಲಾಟ್ ಮಾಲೀಕರು ಕಡ್ಡಾಯವಾಗಿ ಆನ್‌ಲೈನ್ ಪೋರ್ಟಲ್ ಮೂಲಕ ಇ-ಖಾತಾ ಪಡೆಯಬೇಕು ಅಧಿಕಾರಿಗಳು ತಿಳಿಸಿದ್ದಾರೆ.

ಇ-ಖಾತಾ ದೊರಕಿದ ನಂತರವೇ ಎ-ಖಾತಾ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ. ಪ್ರತ್ಯೇಕ ಫ್ಲಾಟ್ ಮಾಲೀಕರಿಂದ ವೈಯಕ್ತಿಕ ಅರ್ಜಿಯೇ ಕಡ್ಡಾಯವಾಗಿದೆ.

- Advertisement - 

ಪರಿಷ್ಕೃತ ವ್ಯವಸ್ಥೆಯಡಿ ಮಾಲೀಕರು ತಮ್ಮ ಮಾಲೀಕತ್ವದ ದಾಖಲೆಗಳು ಹಾಗೂ ಆಸ್ತಿ ತೆರಿಗೆ ಪಾವತಿ ವಿವರಗಳನ್ನು ಅಪ್‌ಲೋಡ್ ಮಾಡಿ ಇ-ಖಾತಾಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಹತೆಗೆ ಪ್ರಸ್ತುತ ವರ್ಷದ ಆಸ್ತಿ ತೆರಿಗೆಯ ಸಂಪೂರ್ಣ ಪಾವತಿ, ಮಂಜೂರಾದ ಕಟ್ಟಡ ಯೋಜನೆ ಹಾಗೂ ಬಿ-ಖಾತಾ ಹೊಂದಿರುವ ಭೂಮಿಯ ದಾಖಲೆಗಳನ್ನು ಹೊಂದಿರುವುದು ಅಗತ್ಯವಾಗಿದೆ.

1961ರ ಪುರಸಭೆ ಕಾಯ್ದೆಯ ನಿಬಂಧನೆ ಉಲ್ಲಂಘಿಸಿದ ಅಪಾರ್ಟ್‌ಮೆಂಟ್‌ಗಳನ್ನೂ ಎ-ಖಾತಾಗೆ ಪರಿಗಣಿಸಬಹುದು. ಆದರೆ ಉಲ್ಲಂಘನೆಯ ಪ್ರಮಾಣದ ಆಧಾರದಲ್ಲಿ ದಂಡ ವಿಧಿಸಲಾಗುತ್ತದೆ.

ಪ್ರಮುಖ ನಿರ್ಮಾಣ ಉಲ್ಲಂಘನೆಗಳಿದ್ದರೆ ಮಾರ್ಗದರ್ಶನ ಮೌಲ್ಯದ ಶೇ. 5 ರಿಂದ 50 ರವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ಜಿಬಿಎ ಅಧಿಕಾರಿಗಳು ನೀಡಿದ್ದಾರೆ.

Share This Article
error: Content is protected !!
";