ಖರ್ಗೆ ಭೇಟಿ ಮಾಡಿದ ಡಿಕೆ ಶಿವಕುಮಾರ್

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಸದಾಶಿವನಗರದಲ್ಲಿನ ಮನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ.

ಸೋಮವಾರ ಡಿಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷರನ್ನು ದಿಢೀರ್ ಭೇಟಿ ಮಾಡಿದ ಪ್ರಕರಣವು ಈಗ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

- Advertisement - 

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯವಾಗಿ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ರಾಜ್ಯ ಕಾಂಗ್ರೆಸ್ ನಾಯಕತ್ವ ಬದಲಾವಣೆ ಕುರಿತು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ನವೆಂಬರ್, ಡಿಸೆಂಬರ್ ಮತ್ತು ಈಗ ಜನವರಿ ತಿಂಗಳಲ್ಲೂ ಈ ಚರ್ಚೆ ಮುಂದುವರಿದಿದೆ. ಸಿದ್ದರಾಮಯ್ಯ ಅವರು ದೇವರಾಜ ಅರಸು ಅವರ ದಾಖಲೆ ಮುರಿದ ನಂತರ ಏನಾದರೂ ಬದಲಾವಣೆ ಆಗುತ್ತದೆಯೇ ಎಂಬ ಪ್ರಶ್ನೆಗಳಿದ್ದವು ಆದರೆ ದಾಖಲೆ ಮುರಿದ ನಂತರವು ಅದಕ್ಕೆ ಉತ್ತರ ಸಿಕ್ಕಿಲ್ಲ.

- Advertisement - 

ಒಕ್ಕಲಿಗ ಸಮುದಾಯದ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ನೀಡಿದ ಹೇಳಿಕೆಗಳು ಹಾಗೂ ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿಯನ್ನು ಲೀಸ್ ಆಧಾರಿತ ಸಿಎಂ ಎಂದು ಟೀಕಿಸಿದ್ದು ಇಂತಹ ರಾಜಕೀಯ ಬೆಳವಣಿಗೆಗಳಿಗೆ ಮತ್ತಷ್ಟು ಇಂಬು ನೀಡಿದ್ದನ್ನು ಸ್ಮರಿಸಬಹುದಾಗಿದೆ.

 

Share This Article
error: Content is protected !!
";