ಮನರೇಗಾದ ಲೋಪದೋಷ ಸರಿಪಡಿಸಿ ಜಿ ರಾಮ್ ಜಿ ಜಾರಿಗೆ ತರಲಾಗಿದೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿಂದಿನ ಮನರೇಗಾ ಯೋಜನೆಯ ಲೋಪದೋಷಗಳನ್ನು ಸರಿಪಡಿಸಿ ಪ್ರಧಾನಿ  ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿರ್ಮಾಣದ ಸಂಕಲ್ಪಕ್ಕೆ ಪೂರಕವಾಗಿ ಜಾರಿಗೆ ತರಲಾಗಿರುವ ಯೋಜನೆಯೇ

ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.

- Advertisement - 

ಈ ಯೋಜನೆಯ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ನಡೆಸುತ್ತಿರುವ ಅಪಪ್ರಚಾರ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮೈಸೂರಿನಲ್ಲಿ ಇಂದು ಮಾಧ್ಯಮಗೋಷ್ಠಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಮೈಸೂರು-ಕೊಡಗು ಸಂಸದ ಯಧುವೀರ ಒಡೆಯರ್, ಶಾಸಕ ಟಿ.ಎಸ್ ಶ್ರೀನಿವಾಸ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ನಾಗೇಂದ್ರ, ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷ  ಕುಂಬ್ರಹಳ್ಳಿ ಸುಬ್ಬಣ್ಣ, ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಮಾಜಿ ಮೇಯರ್ ಸಂದೇಶ ಸ್ವಾಮಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು  ಉಪಸ್ಥಿತರಿದ್ದರು.

- Advertisement - 

 

Share This Article
error: Content is protected !!
";