ರಾಹುಲ್ ಗಾಂಧಿ-ಸಿದ್ದರಾಮಯ್ಯ ಭೇಟಿ, ಮಾರ್ಚ್ ಮೊದಲ ವಾರ ಬಜೆಟ್ ಮಂಡನೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು, ಮಾರ್ಗ ಮಧ್ಯೆ ಭೇಟಿ ಮಾಡಿದ್ದೇನೆ. ಈ ಸಂದರ್ಭದಲ್ಲಿ ಅವರ ಜೊತೆ ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿಲ್ಲ. ಸಂಜೆ ಅವರು ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ. ಶಾಸಕರಿಗೆ ಈ ಕುರಿತು ಮಾಹಿತಿ ಇರುವುದಿಲ್ಲ. ಈ ವಿಚಾರದಲ್ಲಿ ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಬೇಕು ಎಂದು ಸಿಎಂ ತಿಳಿಸಿದರು.

- Advertisement - 

ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು. ಈ ವಿಚಾರದಲ್ಲಿ ನಮ್ಮ ಪಕ್ಷದ ಶಾಸಕರಿಗಿಂತ ಮಾಧ್ಯಮಗಳು ಹೆಚ್ಚು ಆಸಕ್ತಿ ತೋರುತ್ತಿವೆ ಎಂದು ಸಿದ್ದರಾಮಯ್ಯ ಮಾಧ್ಯಮಗಳ ವಿರುದ್ಧ ಗರಂ ಆದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ಜನರು ನಮ್ಮನ್ನು ಆಶೀರ್ವದಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿಎಂ ಹೇಳಿದರು.

- Advertisement - 

ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು. ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶ ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Share This Article
error: Content is protected !!
";