ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಗಸ್ಟ್ ವೇಳೆಗೆ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ ಮಾಡಲಾಗುತ್ತದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹೇಳಿದರು.

ಆಸ್ಟ್ರೇಲಿಯಾದ ಅಗ್ರಗಣ್ಯ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ನ್ಯೂಸೌತ್ ವೇಲ್ಸ್ (UNSW) ವಿವಿ ಈ ವರ್ಷದ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ತನ್ನ ಕ್ಯಾಂಪಸ್ ಆರಂಭಿಸಲಿದೆ. ಮುಂಬರುವ ದಿನಗಳಲ್ಲಿ ಕ್ವಿನ್ ಸಿಟಿಯಲ್ಲಿ ಕ್ಯಾಂಪಸ್ ಅಸ್ತಿತ್ವಕ್ಕೆ ಬರಲಿದೆ. ಈ ಸಂಬಂಧದ ಒಪ್ಪಂದಕ್ಕೆ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಸಹಿ ಹಾಕಲಾಯಿತು ಎಂದು ಎಂ.ಬಿ ಪಾಟೀಲ್ ತಿಳಿಸಿದರು.

- Advertisement - 

ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಟಿಲಾ ಬ್ರಂಗ್ಸ್ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಒಪ್ಪಂದ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ಜಾಗತಿಕ ಟಾಪ್-20 ವಿಶ್ವವಿದ್ಯಾಲಯವೊಂದು ಕರ್ನಾಟಕಕ್ಕೆ ಆಗಮಿಸುವ ಈ ಐತಿಹಾಸಿಕ ಹೆಜ್ಜೆಯಿಂದ, ಭಾರತೀಯ ವಿದ್ಯಾರ್ಥಿಗಳು ದೇಶದ ಹೊರಗೆ ಹೋಗದೆ ವಿಶ್ವಮಟ್ಟದ UNSW ಶಿಕ್ಷಣ ಹಾಗೂ ಪದವಿಗಳನ್ನು ಪಡೆಯುವ ಅವಕಾಶ ಸೃಷ್ಟಿಯಾಗಲಿದೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು.

- Advertisement - 

ಸದ್ಯಕ್ಕೆ ವಾಣಿಜ್ಯ, ಮಾಧ್ಯಮ, ಕಂಪ್ಯೂಟರ್ ಮತ್ತು ಡೇಟಾ ವಿಜ್ಞಾನ ಕೋರ್ಸುಗಳಲ್ಲಿ ಪದವಿ ಹಾಗೂ ಸೈಬರ್ ಸೆಕ್ಯುರಿಟಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಶಿಕ್ಷಣ ಲಭ್ಯ ಆಗಲಿದೆ ಎಂದು ಸಚಿವರು ತಿಳಿಸಿದರು.

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 2025-30ರ ಅವಧಿಯ ಶೈಕ್ಷಣಿಕ, ಸಂಶೋಧನಾತ್ಮಕ ಸಹಭಾಗಿತ್ವ ಕಾರ್ಯಕ್ರಮ ಈಗ ಚಾಲ್ತಿಯಲ್ಲಿದೆ.

ನ್ಯೂಸೌತ್ ವೇಲ್ಸ್ ವಿ.ವಿ. ಬೆಂಗಳೂರಿನಲ್ಲಿರುವ ಐಐಎಂ, ಭಾರತೀಯ ವಿಜ್ಞಾನ ಮಂದಿರ, ರಾಷ್ಟ್ರೀಯ ಕಾನೂನು ವಿವಿ, ಕೇಂದ್ರ ಸರಕಾರದ ಹೆದ್ದಾರಿ ಮತ್ತು ಉಕ್ಕು ಸಚಿವಾಲಯ, ಹಾಗೂ ರಾಜ್ಯದ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದೊಂದಿಗೆ ನಿಕಟ ಸಂಬಂಧ ಹೊಂದಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ
, ಇನ್ವೆಸ್ಟ್ ಕರ್ನಾಟಕ ಫೋರಂನ ಸಿಇಒ ಜ್ಯೋತ್ಸ್ನಾ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Share This Article
error: Content is protected !!
";