ಕಾಂಗ್ರೆಸ್‌ ಮುಖಂಡರ ಗೂಂಡಾಗಿರಿ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕಾಂಗ್ರೆಸ್‌ಮುಖಂಡರ ಗೂಂಡಾಗಿರಿ ಜೋರಾಗಿದೆ ಎಂದು ಜೆಡಿಎಸ್ ಟೀಕಿಸಿದೆ.

ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್‌ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ.

- Advertisement - 

ಶಿಡ್ಲಘಟ್ಟದ ಕೋಟೆ ಸರ್ಕಲ್‌ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್‌ಬ್ಯಾನರ್‌ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ. 

ಇದಕ್ಕೆ ಕಾಂಗ್ರೆಸ್‌ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್‌ತೆಗೆಸಿದವರನ್ನು ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ ಎಂದು ಜೆಡಿಎಸ್ ಹರಿಹಾಯ್ದಿದೆ.

- Advertisement - 

ಸಿಎಂ ಸಿದ್ದರಾಮಯ್ಯ, ಗೃಹ ಸಚಿವರ ಡಾ.ಜಿ ಪರಮೇಶ್ವರ್ ಅವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ಗೂಂಡಾ ರಾಜೀವ್‌ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ ಎಂದು ಜೆಡಿಎಸ್ ಆಗ್ರಹಿಸಿದೆ. 

ಕಾಂಗ್ರೆಸ್‌ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೇ, ಕೆಪಿಸಿಸಿ ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್‌ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ ಎಂದು ಜೆಡಿಎಸ್ ತಾಕೀತು ಮಾಡಿದೆ.

 

Share This Article
error: Content is protected !!
";