ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ನಡಿ ಸಿಲುಕಿದರೂ ಪವಾಡಸದೃಶ ರೀತಿಯಾಗಿ ಪ್ರಯಾಣಿಕನೊಬ್ಬ ಪಾರಾಗಿರುವ ಘಟನೆ ಚಿಕ್ಕಮಗಳೂರಿನ ಬಸ್ ನಿಲ್ದಾಣದಲ್ಲಿ ಜರುಗಿದೆ.
ಸಿಸಿ ಕ್ಯಾಮೆರಾದಲ್ಲಿ ಬೆಚ್ಚಿ ಬೀಳಿಸುವ ಅಪಘಾತದ ದೃಶ್ಯ ಸೆರೆಯಾಗಿದ್ದು, ಕುರುವಂಗಿ ಮೂಲದ ಆಂಜನೇಯ (75) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುರುವಂಗಿ ಗ್ರಾಮಕ್ಕೆ ತೆರಳಲು ಬಸ್ ನಿಲ್ದಾಣಕ್ಕೆ ಆಂಜನೇಯ ಬಂದಿದ್ದಾಗ ಅವಘಡ ಸಂಭವಿಸಿದೆ.
ಬಸ್ ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಜನವರಿ 7ರಂದು ನಡೆದ ಘಟನೆಯ ದೃಶ್ಯ ತಡವಾಗಿ ವೈರಲ್ ಆಗಿದೆ.

