ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರು ನಗರಕ್ಕೆ ಒಲಿಂಪಿಕ್ ಕ್ರೀಡಾಕೂಟ ಉದ್ಘಾಟಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ.
ಜನವರಿ-16 ರಂದು ಶುಕ್ರವಾರ ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ತುಮಕೂರಿಗೆ ತೆರಳಬೇಕಿತು.
ಆದರೆ ಹೆಲಿಕಾಪ್ಟರ್ ನಲ್ಲಿ ಕಂಡು ಬಂದ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಟೇಕಾಫ್ ಆಗಿಲ್ಲ. ಆಗ ಸಿದ್ದರಾಮಯ್ಯ ಬೆಂಗಳೂರಿನಿಂದ ರಸ್ತೆ ಮೂಲಕವೇ ತುಮಕೂರಿಗೆ ತೆರಳಿ ಘಟನೆ ಜರುಗಿತು.

