ಮುಖ್ಯಮಂತ್ರಿ ಸ್ಥಾನದ ವಿಷಯ ಬಹಿರಂಗ ಮಾಡಲು ಸಾಧ್ಯವಿಲ್ಲ-ಡಿಸಿಎಂ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸ್ಥಾನದ ವಿಷಯ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರವಾಗಿದ್ದು ಇಂತಹ ಸೂಕ್ಷ್ಮ ವಿಚಾರಗಳನ್ನ ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ದೆಹಲಿಯಲ್ಲಿ ಈ ಕುರಿತು ಡಿಕೆ ಶಿವಕುಮಾರ್ ಅವರು ಮಾತನಾಡಿದರು. ಅಧಿಕಾರ ಹಂಚಿಕೆ ಸಂಬಂಧ ಸಿಎಂ ಸ್ಥಾನ ಕುರಿತು ರಾಹುಲ್ ಗಾಂಧಿ ಅವರ ಜೊತೆ ಚರ್ಚೆ ಮಾಡಲಾಯಿತೇ? ಎನ್ನುವ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ ಶಿವಕುಮಾರ್, ಅಸ್ಸಾಂ ಚುನಾವಣೆ ಸಂಬಂಧ ಹೈಕಮಾಂಡ್ ನಾಯಕರ ಜತೆ ಇಂದು ಸಭೆ ಇದೆ ಎಂದು ಹೇಳಿದರು.

- Advertisement - 

ಸಭೆಯ ಯೋಜನೆಗಳೇನು ಎಂದು ಪತ್ರಕರ್ತರು ಕೇಳಿದಾಗ, ಪಕ್ಷದ ಚುನಾವಣಾ ಯೋಜನೆಗಳನ್ನು ಬಹಿರಂಗಪಡಿಸಲು ಹೇಗೆ ಸಾಧ್ಯ? ಇದನ್ನು ಪಕ್ಷದ ಮಟ್ಟದಲ್ಲಿ ಮಾತ್ರ ಚರ್ಚೆ ಮಾಡಲಾಗುವುದು. ಸಾರ್ವಜನಿಕವಾಗಿ ಅಲ್ಲ. ಏನಾದರೂ ಮಾಹಿತಿ ನೀಡುವುದಿದ್ದರೆ, ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಇದ್ದಾರೆ, ಅವರು ನೀಡುತ್ತಾರೆ ಎಂದು ಡಿಸಿಎಂ ಹೇಳಿದರು.

ಈ ಸಂದರ್ಭದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚಿಸುತ್ತೀರಾ? ಎನ್ನುವ ಪತ್ರಕರ್ತರ ಪ್ರಶ್ನೆಗೆ, ಪಕ್ಷದ ನಾಯಕರ ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ ನೋಡೋಣ ಎಂದು ಹೇಳಿದರು.

- Advertisement - 

ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕಾನೂನಾತ್ಮಕ ವಿಚಾರಗಳನ್ನು ಜಲಸಂಪನ್ಮೂಲ ಸಚಿವರು ಸೇರಿದಂತೆ ಇತರರೊಂದಿಗೆ ಚರ್ಚೆ ಮಾಡಬೇಕಾಗಿದೆ. ಹೀಗಾಗಿ, ಕಾನೂನು ತಜ್ಞರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ ಎಂದು ಸಿಡಿಎಂ ತಿಳಿಸಿದರು.

ಬಹಿರಂಗ ಪಡಿಸಲು ಆಗಲ್ಲ:
ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಜೊತೆ ಮೈಸೂರು ವಿಮಾನ‌ನಿಲ್ದಾಣದಲ್ಲಿ ಪ್ರತ್ಯೇಕವಾಗಿ ಚರ್ಚೆ ನಡೆಸಲಸುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು
, ಅಂಥಹ ವಿಚಾರ ಮಾತನಾಡಿಲ್ಲ ಎಂದು ನಾನು ಹೇಳುವುದಿಲ್ಲ. ಅದನ್ನೆಲ್ಲ ನಾನು ಬಹಿರಂಗಪಡಿಸಲು ಆಗುವುದಿಲ್ಲ.

ಅದು ನನ್ನ ಹಾಗೂ ರಾಹುಲ್ ಗಾಂಧಿ ಅವರಿಗೆ ಬಿಟ್ಟ ವಿಚಾರವಾಗಿದೆ. ಅಲ್ಲದೇ, ನಾನು ಅವರನ್ನು ಭೇಟಿ ಮಾಡುವುದು ಹೊಸತೇನಲ್ಲ. ದೆಹಲಿಯಲ್ಲಿ ಎಲ್ಲಾ ನಾಯಕರು ಅಲ್ಲೇ ಇರುತ್ತಾರೆ. ಮತ್ತೆ ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.

ಮೈಸೂರಿನಲ್ಲಿ ರಾಹುಲ್ ಗಾಂಧಿ ಭೇಟಿ ಮಾಡಿದ ನಂತರ ನಿಮ್ಮ ಬೆಂಬಲಿಗ ಶಾಸಕರ ಪ್ರತಿಕ್ರಿಯೆ ಏನು ಎಂದು ಕೇಳಿದಾಗ, ಅವರು ನಮ್ಮ ಪಕ್ಷದ ನಾಯಕರು. ನಮ್ಮ ಪಕ್ಷದ ನಾಯಕರನ್ನು, ಅಧ್ಯಕ್ಷರನ್ನು ಭೇಟಿ ಮಾಡುವುದು, ಪೋನ್ ಕರೆ ಮೂಲಕ ಚರ್ಚೆ ಮಾಡುವುದು ಸಹಜ ಪ್ರಕ್ರಿಯೆ. ಅವುಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ತಿಳಿಸಿದರು.

 

Share This Article
error: Content is protected !!
";