ಕಾಂಗ್ರೆಸ್ ಸರ್ಕಾರ ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಹೊರಡಿಸಿಲಿ-ನಿಖಿಲ್

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಿನನಿತ್ಯ ರಾಜ್ಯದ ಜನರ ಸೇವೆ ಮಾಡುವ ನರ್ಸ್ ಗಳಿಗೆ ವೇತನ ನೀಡುವುದಕ್ಕೂ ದಿವಾಳಿ ಭಾಗ್ಯಗಳ ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

20 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ 30,000 ಒಳಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ  ಮೂರು ತಿಂಗಳಿಂದ ವೇತನವಿಲ್ಲದೇ ಗೋಳಾಡುತ್ತಿದ್ದಾರೆ. ಅವರ ಅಳಲನ್ನು ಕೇಳಬೇಕಾದ ಸರ್ಕಾರ ಕುರ್ಚಿ ಗಲಾಟೆಯಲ್ಲಿ ಮೈಮರೆತಿದೆ.

- Advertisement - 

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ, ಸರ್ಕಾರ  ದಿವಾಳಿಯಾಗಿಲ್ಲ, ನಮ್ಮ ಖಜಾನೆ ತುಂಬಿ ತುಳುಕುತ್ತಿದೆ ಎಂಬ ಹಸಿ ಹಸಿ ಸುಳ್ಳು ಹೇಳುವುದನ್ನು ನಿಲ್ಲಿಸಿ, ಈ ಕೂಡಲೇ ಕರ್ನಾಟಕ ಸರ್ಕಾರದ ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಹೊರಡಿಸಿ‌ಎಂದು ನಿಖಿಲ್ ಆಗ್ರಹಿಸಿದ್ದಾರೆ.

 

- Advertisement - 

Share This Article
error: Content is protected !!
";