ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಓಲೈಕೆ ರಾಜಕಾರಣವೇ ಬಾಂಗ್ಲಾದೇಶದ ಅಕ್ರಮ ವಲಸಿಗರ ಹೆಚ್ಚಳಕ್ಕೆ ಕಾರಣ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಕರ್ನಾಟಕದಲ್ಲಿ 20 ಲಕ್ಷಕ್ಕೂ ಹೆಚ್ಚು ಬಾಂಗ್ಲಾ ಅಕ್ರಮ ವಲಸಿಗರು ನೆಲೆಸಿದ್ದಾರೆ ಎಂಬುದು ಆತಂಕಕಾರಿ ಬೆಳವಣಿಗೆಯಾಗಿದೆ. ಒಂದು ಸಮುದಾಯದ ತುಷ್ಟೀಕರಣ ಮಾಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಅಕ್ರಮ ವಲಸಿಗರವಿಚಾರದಲ್ಲಿ ಕಂಡು ಕಾಣದಂತೆ ಮೌನವಹಿಸಿದೆ ಎಂದು ಜೆಡಿಎಸ್ ದೂರಿದೆ.
ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿರುವ ಕರ್ನಾಟಕ ಕಾಂಗ್ರೆಸ್ ಪಕ್ಷದ ಅತೀಯಾದ ಓಲೈಕೆಯ ಪರಿಣಾಮ ಬಾಂಗ್ಲಾ ಅಕ್ರಮ ವಲಸಿಗರಿಗೆ ಕರ್ನಾಟಕ ಆಶ್ರಯ ತಾಣವಾಗಿರುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ.
ರಾಜ್ಯ ಸರ್ಕಾರ ಇನ್ನಾದರೂ ಹೆಚ್ಚೆತ್ತು ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರನ್ನು ಹೊರಹಾಕಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ಜೆಡಿಎಸ್ ಆಗ್ರಹ ಮಾಡಿದೆ.

