ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಇದೇ ಜ.23ರಂದು ಜಿಲ್ಲಾ ವ್ಯಾಪ್ತಿಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಶಾಲಾ ಕಾಲೇಜುಗಳಲ್ಲಿ ಮತದಾರರ ಪ್ರತಿಜ್ಞಾವಿಧಿ ಸ್ವೀಕರಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ ನೀಡಿದ್ದಾರೆ.
ಜ.25ರಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷವೂ ಜ.25ರಂದು 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ನನ್ನ “ಭಾರತ ನನ್ನ ಮತ” (My India, My vote) with the tagline of citizen at Heart of Indian Demogracy (ಭಾರತೀಯ ಪ್ರಜಾಪ್ರಭುತ್ವದ ಹೃದಯದಲ್ಲಿ ಭಾರತೀಯ ನಾಗರೀಕ) ಎಂಬ ವಿಶೇಷ ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿದೆ.
ಪ್ರತಿ ವರ್ಷದ ಹಾಗೆ ಈ ವರ್ಷವೂ ಸಹ ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಹಾಗೂ ಜ.23 ರಂದು ಮತದಾರರ ಪ್ರತಿಜ್ಞಾವಿಧಿ ಬೋಧನೆಯನ್ನು ಮಾತ್ರ ಹಮ್ಮಿಕೊಳ್ಳಬೇಕು.
ಕೇಂದ್ರ ಚುನಾವಣಾ ಆಯೋಗವು ಸಿದ್ದಪಡಿಸಿರುವ ವೋಟರ್ ಪ್ಲೆಡ್ಜ್ ಪ್ರತಿಯಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಮತದಾರರ ಪ್ರತಿಜ್ಞಾವಿಧಿ ಸ್ವೀಕರಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

