ಚಂದ್ರವಳ್ಳಿ ನ್ಯೂಸ್, ಮೈಸೂರು:
ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ಶ್ರೀ ಮುತ್ತತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಕೃಷಿ ವಿಚಾರಸಂಕಿರಣ ಉದ್ಘಾಟನೆ ಕೃಷಿಯಲ್ಲಿ ಮಹಿಳೆ ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸುತ್ತೂರು ಜಾತ್ರಾ ಮಹೋತ್ಸವ ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ.ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಸುತ್ತೂರು ಮಠ ಶಿಕ್ಷಣಕ್ಕೆ ಮೊದಲಿನಿಂದಲೂ ಹೆಚ್ಚು ಒತ್ತು ಕೊಡುತ್ತಾ ಬಂದಿದೆ. ಧಾರ್ಮಿಕವಾಗಿ ತೊಡಗಿಸಿಕೊಂಡಿರುವ ಜೊತೆಗೆ ಜ್ಞಾನ ಮತ್ತು ಅನ್ನದಾಸೋಹಕ್ಕೆ ಮಹತ್ವ ನೀಡಿದೆ. ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬರಲು ಸಾಧ್ಯವಾಗುವುದರಿಂದ ಶಿಕ್ಷಣವೇ ಬಹಳ ಮುಖ್ಯ. ನೂರಕ್ಕೆ ಶೇ.75% ಜನ ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಅದನ್ನು ಮನಗಂಡ ಮಠ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದಿದೆ ಎಂದರು.
ಎಲ್ಲ ಧರ್ಮಕ್ಕಿಂತ ಮಾನವ ಧರ್ಮ ಮೇಲು:
ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣ ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ ಧರ್ಮಕ್ಕಿಂತ ಮಾನವ ಧರ್ಮ ಮೇಲು ಎಂದು ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲರೂ ಮೂಲತಃ ಮನುಷ್ಯರು. ಯಾವುದೇ ಧರ್ಮವಿದ್ದರೂ ಮನುಷ್ಯರು ಪರಸ್ಪರ ಪ್ರೀತಿಸಬೇಕು ಎಂದು ಹೇಳುತ್ತದೆಯೇ ವಿನ: ದ್ವೇಷ ಮಾಡಿ ಎಂದು ಹೇಳಿಕೊಡುವುದಿಲ್ಲ. ಇದೇ ಸಮಾಜಕ್ಕೆ ನಾವು ಕೊಡುವ ಕೊಡುಗೆ ಎಂದರು.
ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ:
ಶ್ರೀರಾಮುಲು, ಜನಾರ್ಧನ ರೆಡ್ಡಿ ಯವರು ಕಾಂಗ್ರೆಸ್ ನಾಯಕರನ್ನು ಏಕವಚನದಲ್ಲಿ ವಾಗ್ದಾಳಿ ಮಾಡಿರುವ ಬಗ್ಗೆ ಮಾತನಾಡಿ ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದೂ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದಾಗ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ವರದಿ ಕೊಟ್ಟಿದ್ದಾರೆ ಎಂದರು.
ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ:
ಲೋಕಸಭಾ ಚುನಾವಣೆಗೆ ಪ್ರಚಾರಕ್ಕೆ ಬಂದಾಗ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ ದೇವಸ್ಥಾನದ ಬಳಿ ಸಭೆ ನಡೆಸಿದೆವು. ಇವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಸರ್ವಾಧಿಕಾರದಲ್ಲಿ ನಂಬಿಕೆ ಇದೆ ಎನ್ನಲು ಇದೊಂದು ಉದಾಹರಣೆ ಸಾಕು ಎಂದರು.
ಸಂಸದೀಯ ವ್ಯವಸ್ಥೆಯಲ್ಲಿ ಅವರಿಗೆ ನಂಬಿಕೆಯಿಲ್ಲ. ಗೂಂಡಾಗಿರಿ ಮಾಡುತ್ತಿದ್ದವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದರು.
ಕಾಂಗ್ರೆಸ್ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಕಾಂಗ್ರೆಸ್ ರಿಪಬ್ಲಿಕ್ ಆಫ್ ಕರ್ನಾಟಕ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕಾಂಗ್ರೆಸ್ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ ? ಎಂದು ಸಿಎಂ ಪ್ರಶ್ನಿಸಿದರು.
ವಿಬಿಜಿ ಗ್ರಾಮ್ ಮ್ ಜಿ ರದ್ದು ಮಾಡಲು ಒತ್ತಾಯಿಸಲು ಅಧಿವೇಶನ:
ಅಧಿವೇಶನ ಆಯೋಜಿಸಿರುವುದು ರಾಜಕೀಯ ದುರ್ಬಳಕೆ ಎಂದು ಬಿಜೆಪಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಹೊಸ ವರ್ಷದಲ್ಲಿ ಜಂಟಿ ಅಧಿವೇಶನ ಕಡ್ಡಾಯವಾಗಿ ಕರೆಯಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ.ಅದಕ್ಕಾಗಿ ಕರೆದಿದ್ದೇವೆ.
ಮನರೇಗಾ ಮೂಲಕ ಉದ್ಯೋಗ ಖಾತ್ರಿ, ಶಿಕ್ಷಣ, ಮಾಹಿತಿ ಹಕ್ಕು ಆಹಾರ ಭದ್ರತೆ ತಂದದ್ದು ಯುಪಿಎ ಸರ್ಕಾರ. ಅದನ್ನು ಹಾಳು ಮಾಡಲು ಹೊರಟಿಸುವುದನ್ನು ಖಂಡಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ. ವಿಬಿಜಿ ಗ್ರಾಮ್ ಮ್ ಜಿ (ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಜೀವಿಕ ಮಿಷನ್ ಗ್ರಾಮೀಣ ಎನ್ನುವುದು ಇದರ ಅರ್ಥ. ಕಾರ್ಯಕ್ರಮವನ್ನು ರದ್ದು ಮಾಡಬೇಕೆಂದು ಒತ್ತಾಯಿಸಲಾಗುತ್ತಿದೆ ಎಂದರು. ಅದರರ್ಥ ರಾಮ್ ಅಲ್ಲ ಎಂದರು.
ಲೋಕಾಯುಕ್ತ ದಾಳಿ: ಕಾನೂನಿನ ಕ್ರಮಕ್ಕೆ ನಾವು ಅಡ್ಡಿಬರುವುದಿಲ್ಲ:
ಅಬಕಾರಿ ಡಿಸಿ ಮೇಲೆ ಲೋಕಾಯುಕ್ತ ದಾಳಿಯಾಗಿರುವ ಬಗ್ಗೆ ಹಾಗೂ ಅಬಕಾರಿ ಸಚಿವರ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಮಾತಾಡಿ ಈ ಬಗ್ಗೆ ಕಾನೂನಿನ ಕ್ರಮಕ್ಕೆ ನಾವು ಅಡ್ಡಿಬರುವುದಿಲ್ಲ. 40% ಕಮಿಷನ್ ಪಡೆಯುತ್ತಾರೆ ಎಂದು ಗುತ್ತಿಗೆದಾರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಆರೋಪ ಮಾಡಿದ್ದರಲ್ಲ ಎಂದರು.

