ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸಮಾಜವಾದಿ ಅಧ್ಯಯನಕೇಂದ್ರ ಮತ್ತು ಸಮಾಜವಾದಿ ಸಮಾಗಮಸಂಸ್ಥೆ ಆಯೋಜಿಸಿದ್ದ “ದಕ್ಷಿಣ ಭಾರತ ಸಮಾಜವಾದಿಗಳಸಮ್ಮೇಳನ” ಉದ್ಘಾಟಿಸಿ, ಶುಭ ಹಾರೈಸಿದರು.
ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ಸುದರ್ಶನರೆಡ್ಡಿ ಅವರು ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಹಿರಿಯ ಸಮಾಜವಾದಿ ಚಿಂತಕ ಹಾಗೂ ಮಾಜಿ ಹಣಕಾಸು ಸಚಿವರಾದ ಕೇರಳ ರಾಜ್ಯದ ಐಸಾಕ್ ಥಾಮಸ್, ತೆಲಂಗಾಣ ಶಾಸಕ ವಂಶಿಕೃಷ್ಣ, ಮಾಜಿ ಸಂಸದ ಥಂಪನ್ ಥಾಮಸ್, ಕಾರ್ಮಿಕ ಮುಖಂಡರಾದ ಗೀತಾ ರಾಮಕೃಷ್ಣನ್, ಮಾಜಿ ಸಂಸದ ಎಲ್.ಹನುಮಂತಯ್ಯ, ಸಮಾಜವಾದಿ ಅಧ್ಯಯನ ಕೇಂದ್ರದ ಅಧ್ಯಕ್ಷ ಸುಂದರ್ ಅವರುಗಳು ಉಪಸ್ಥಿತರಿದ್ದರು.

