ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಿಯ ಅಧ್ಯಕ್ಷರಾಗಿ ಸಚಿವ ಈಶ್ವರ ಖಂಡ್ರೆ ಆಯ್ಕೆ

News Desk
- Advertisement -  - Advertisement -  - Advertisement - 
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ರಾಗಿ ಸಚಿವ ಬಿ. ಈಶ್ವರ ಖಂಡ್ರೆ ಆಯ್ಕೆಯಾಗಿದ್ದಾರೆ. ಮಹಾಸಭಾದ ರಾಷ್ಟ್ರಿಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ರವರ ನಿಧನದಿಂದ ತೆರವಾದ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈಶ್ವರ ಖಂಡ್ರೆ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಅಖಿಲ ಭಾರತ ರಾಷ್ಟ್ರೀಯ ವೀರಶೈವ ಲಿಂಗಾಯತ ಮಹಾಸಭಾ ಪ್ರಕಟಣೆಯಲ್ಲಿ ತಿಳಿಸಿದೆ.
      ಅಖಿಲ ಭಾರತ ರಾಷ್ಟ್ರೀಯ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ ರವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ಅಧ್ಯಕ್ಷರಾದ ಲೋಕೇಶ್ ನಾಗಸಂದ್ರ, ದೊಡ್ಡಬಳ್ಳಾಪುರ ತಾಲೂಕು ಮಹಾಸಭಾ, ತಾಲೂಕು ಯುವಘಟಕ, ಹಾಗೂ ಸಮುದಾಯದ ಸಮಸ್ತ ಬಂದುಗಳು ಅಭಿನಂದಿಸಿದ್ದಾರೆ.

Share This Article
error: Content is protected !!
";