ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬೆಂಗಳೂರಿನಲ್ಲಿ ಆಶೀರ್ವಾದ ಪೈಪ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯವರ ಸಹಯೋಗದೊಂದಿಗೆ ವಸತಿಯುತ ವೃತ್ತಿ ಆಧಾರಿತ ಕೌಶಲ್ಯ ತರಬೇತಿ ಪಡೆಯಲು ಅರ್ಹ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜ.31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿಗಳನ್ನು ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂರ್ಪಕಿಸಲು ಸೂಚಿಸಿದೆ.
ಷರತ್ತುಗಳು:
ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸೇರಿದವರಾಗಿರಬೇಕು. ವಿದ್ಯಾರ್ಹತೆ 8ನೇ ತರಗತಿ, ಎಸ್.ಎಸ್.ಎಲ್.ಸಿ, ಐ.ಟಿ.ಐ. ಡಿಪೆÇ್ಲೀಮ, ಪಿ.ಯು.ಸಿ ಉತ್ತೀರ್ಣರಾದ ಮತ್ತು ಪದವಿ ಉತ್ತೀರ್ಣರಾದ ಅಥವಾ ಅನುತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.
ವಿದ್ಯಾರ್ಥಿಯ ವಯೋಮಿತಿಯು ಕನಿಷ್ಠ 18 ವರ್ಷದಿಂದ ಗರಿಷ್ಠ 35 ವಯೋಮಿತಿಯನ್ನು ನಿಗಧಿಪಡಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

