ಚಂದ್ರವಳ್ಳಿ ನ್ಯೂಸ್, ಪ್ರಯಾಗ್ರಾಜ್:
ಭಾರತೀಯ ವಾಯುಪಡೆಯ (ಐಎಎಫ್) ಮೈಕ್ರೋಲೈಟ್ ವಿಮಾನವು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪತನಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದಿದೆ.
ಲಘು ವಿಮಾನದಲ್ಲಿ ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.
ಪ್ರಯಾಗ್‌ರಾಜ್‌ನಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಕೆ.ಪಿ. ಕಾಲೇಜು ಬಳಿ ವಿಮಾನವು ಕೆರೆಗೆ ಅಪ್ಪಳಿಸಿದೆ.
ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ವಿಮಾನ ಪತನಗೊಳ್ಳುತ್ತಿದ್ದಂತೆ ಸ್ಥಳೀಯರಿಗೆ ದೊಡ್ಡ ಶಬ್ದ ಕೇಳಿಬಂದಿದೆ.
ಈ ಘಟನೆಯಿಂದ ಆ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ತಕ್ಷಣ ಸ್ಥಳಕ್ಕೆ ಹೋಗಿ ಇಬ್ಬರೂ ಪೈಲಟ್‌ಗಳನ್ನು ನೀರಿನಿಂದ ಹೊರಬರಲು ಸಹಾಯ ಮಾಡಿದರು.

