ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಇದೇ ಜ.29ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆ ಆಯೋಜಿಸಲಾಗಿದೆ.
ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್.ಮಹೇಶ್ವರಪ್ಪ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಂಟಿ ಕೃಷಿ ನಿರ್ದೇಶಕರು ಹಾಗೂ ಜಿಲ್ಲಾ ಕೃಷಿಕ ಸಮಾಜ ಪದನಿಮಿತ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

