ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಳ್ಳಾರಿಯಲ್ಲಿ ದುಷ್ಕರ್ಮಿಗಳು ನಮ್ಮ ಪಕ್ಷದ ನಾಯಕರಾದ ಜನಾರ್ದನರೆಡ್ಡಿ ಹಾಗೂ ಬಿ.ಶ್ರೀರಾಮುಲು ಅವರ ಜಂಟಿ ಒಡೆತನದ ಮಾಡೆಲ್ ಹೌಸ್ಗೆ ಬೆಂಕಿ ಹೆಚ್ಚಿರುವ ಘಟನೆ ಕೇವಲ ಕಿಡಿಗೇಡಿ ಕೃತ್ಯವಲ್ಲ, ಇದು ವ್ಯವಸ್ಥಿತ ರಾಜಕೀಯ ಪಿತೂರಿಯಂತೆ ಕಾಣುತ್ತಿದೆ.
ಬ್ಯಾನರ್ ಗಲಾಟೆಯ ಮುಂದುವರಿದ ಭಾಗವಾಗಿ ನಮ್ಮ ನಾಯಕರನ್ನು ಗುರಿ ಮಾಡುತ್ತಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದರು.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಜಂಗಲ್ ರಾಜ್ ಪರಿಸ್ಥಿತಿ ನಿರ್ಮಾಣವಾಗಿದೆ.
ನಮ್ಮ ಪೊಲೀಸ್ ವ್ಯವಸ್ಥೆ ರಾಜಕೀಯ ಕೈಗೊಂಬೆಗಳಂತೆ ವರ್ತಿಸದೆ, ಒತ್ತಡಕ್ಕೆ ಮಣಿಯದೆ, ನಿಷ್ಪಕ್ಷಪಾತ ತನಿಖೆ ನಡೆಸಬೇಕು. ರಾಜ್ಯ ಸರ್ಕಾರ ಇಂತಹ ಅತಿರೇಕದ ಹಿಂಸಾತ್ಮಕ ವರ್ತನೆಗಳಿಗೆ ಕಡಿವಾಣ ಹಾಕದಿದ್ದರೆ ಕರ್ನಾಟಕ ಬಿಜೆಪಿ ಬೀದಿಗಿಳಿದು ಹೋರಾಡಲಿದ್ದಾರೆ. ಪರಿಸ್ಥಿತಿ ಕೈಮೀರುವ ಮುನ್ನ ರಾಜ್ಯ ಸರ್ಕಾರ ಎಚ್ಚೆತ್ತಿಕೊಳ್ಳಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

