ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜೋಡಿ ಚಿಕ್ಕೇನಹಳ್ಳಿಯ ನಿವೃತ್ತ ಮುಖ್ಯ ಶಿಕ್ಷಕ ಈ.ಪಾಪಣ್ಣ(61) ಭಾನುವಾರ ನಿಧನರಾಗಿದ್ದಾರೆ.
ಮೃತರು ಚಿತ್ರದುರ್ಗ ತಾಲೂಕಿನ ಜೋಡಿ ಚಿಕ್ಕೇನಹಳ್ಳಿ ನಿವಾಸಿಯಾಗಿದ್ದು ಹಿರಿಯೂರು ತಾಲೂಕಿನ ಶ್ರೀ ವಾಣಿವಿಲಾಸ ಗ್ರಾಮಾಂತರ ಪ್ರೌಢ ಶಾಲೆ ಆರನಕಟ್ಟಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 2025ನೇ ಏಪ್ರಿಲ್ ತಿಂಗಳಲ್ಲಿ ಅವರು ನಿವೃತ್ತರಾಗಿದ್ದರು. ಮೃತರಿಗೆ ಇಬ್ಬರು ಪುತ್ರರು, ಶಿಕ್ಷಕಿ ಪತ್ನಿ ರೇಣುಕಾ ಅವರನ್ನ ಅಗಲಿದ್ದಾರೆ.
ಚಿತ್ರದುರ್ಗ ತಾಲೂಕಿನ ಜೋಡಿಚಿಕ್ಕೇನಹಳ್ಳಿ ಸ್ವಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಮತ್ತು ಅಪಾರ ವಿದ್ಯಾರ್ಥಿ ಬಳಗಕ್ಕೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

