ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಫೆಬ್ರವರಿ 7 ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲು ತೀರ್ಮಾನಿಸಲಾಯಿತು.
ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ರವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಯಿತು.
ಸಚಿವರು ಮಾತನಾಡಿ ಅತ್ಯಂತ ಅರ್ಥಪೂರ್ಣವಾಗಿ ಸಮ್ಮೇಳನ ಮಾಡಬೇಕು. ಸಾಹಿತ್ಯ ಪ್ರೇಮಿಗಳು ಈ ಸಮ್ಮೇಳನಕ್ಕೆ ಕೈಜೋಡಿಸಬೇಕು ಎಂದು ಸುಧಾಕರ್ ಹೇಳಿದರು.
ಸಭೆಯಲ್ಲಿ ತಹಶೀಲ್ದಾರ್ ಎಂ ಸಿದ್ದೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ನಗರಸಭೆ ಮಾಜಿ ಸದಸ್ಯ ಈರಲಿಂಗೇಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ ರಾಮಚಂದ್ರಪ್ಪ, ಕೋಶಾಧ್ಯಕ್ಷ ಜಿ. ಪ್ರೇಮ್ ಕುಮಾರ್, ರೈತ ಸಂಘದ ಅಧ್ಯಕ್ಷ ಹೊರಕೆರಪ್ಪ,
ತಾಲೂಕು ಗೌರವ ಕಾರ್ಯದರ್ಶಿ ಕೃಷ್ಣಮೂರ್ತಿ, ನಿಜಲಿಂಗಪ್ಪ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ, ಜಿಲ್ಲಾ ಸಲಹಾ ಸಮಿತಿ ಸದಸ್ಯ ಹರ್ತಿಕೋಟೆ ಮಹಾಸ್ವಾಮಿ, ಹೋಬಳಿ ಘಟಕದ ಅಧ್ಯಕ್ಷ ಪೊಲೀಸ್ ಬೇಟೆ ಪ್ರಸನ್ನ, ಅಶೋಕ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಿ ಎಲ್ ಮೂರ್ತಿ, ಮಹಮದ್ ಫಕ್ರುದ್ದೀನ್, ಅಜ್ಗರ್ ಮಹಮ್ಮದ್, ಮಹಿಳಾ ಪ್ರತಿನಿಧಿ ವೇದಾ, ಪುಷ್ಪ, ಶಿಲ್ಪಾ ಜಗದೀಶ್, ಶಫಿವುಲ್ಲಾ, ಶಂಕರ್, ರಮೇಶ್, ಸಕ್ಕರ ನಾಗರಾಜು, ಮುದ್ದುರಾಜು ಕೆ ಸಭೆಯಲ್ಲಿ ಭಾಗವಹಿಸಿದ್ದರು.

