ಕಾಂಗ್ರೆಸ್ ಸರ್ಕಾರದ ವಿರುದ್ಧ ಎನ್.ಡಿ.ಎ ಹೋರಾಟ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶಕ್ಕೆ ಧ್ವನಿಯಾಗಿ ಮೊಳಗಿದ ಎನ್.ಡಿ.ಎ ಜನಪ್ರತಿನಿಧಿಗಳ ಹೋರಾಟದ ಕಹಳೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಸದನದಲ್ಲಿ ಘನತೆವೆತ್ತ ರಾಜ್ಯಪಾಲರಿಗೆ ಅಗೌರವ ತೋರಿದ್ದಲ್ಲದೆ ಕಾಂಗ್ರೆಸ್ ಶಾಸಕರು ಅವರ ಮುಂದೆ ಗೂಂಡಾ ವರ್ತನೆ ತೋರಿ ಅಪಮಾನ ಮಾಡಿರುವುದನ್ನು ಖಂಡಿಸಿ, ದುರ್ನಡತೆ ತೋರಿದ ಕಾಂಗ್ರೆಸ್ ಶಾಸಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಅಬಕಾರಿ ಸಚಿವ ಶ್ರೀ ಆರ್.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಮತ್ತು

- Advertisement - 

ರಾಜ್ಯದಲ್ಲಿ ಸಂಪೂರ್ಣ ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ ವಿರುದ್ಧ ಜನಾಗ್ರಹಕ್ಕೆ ಧ್ವನಿಯಾಗಿ, ಉಭಯ ಸದನಗಳ ವಿರೋಧ ಪಕ್ಷದ ನಾಯಕರುಗಳಾದ ಆರ್.ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಉಭಯ ಪಕ್ಷಗಳ ಜಂಟಿ ಸದನದ ಶಾಸಕರುಗಳೊಂದಿಗೆ, ವಿಧಾನಸೌಧದ ಆವರಣದಲ್ಲಿ  ಮಹಾತ್ಮಾ ಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

 

- Advertisement - 

Share This Article
error: Content is protected !!
";