ರಾಜ್ಯಪಾಲರ ಮೇಲಿನ ಗೂಂಡಾಗಿರಿ ವಿರೋಧಿಸಿ ಪ್ರತಿಭಟನೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಂಟಿ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಗೌರವಾನ್ವಿತ ರಾಜ್ಯಪಾಲರ ಮೇಲೆ ಗೂಂಡಾಗಿರಿ ಪ್ರದರ್ಶಿಸಿ ಅಪಮಾನ ಮಾಡಿದ ಕಾಂಗ್ರೆಸ್‌ಸರ್ಕಾರ ಮತ್ತು ಕಾಂಗ್ರೆಸ್‌ನಾಯಕರ ನಡೆಯನ್ನು ಖಂಡಿಸಿ ಹಾಗೂ

ಅಬಕಾರಿ ಇಲಾಖೆಯ ಭ್ರಷ್ಟಾಚಾರದಲ್ಲಿ ತೊಡಗಿರುವ ಮಂತ್ರಿ ಆರ್.ಬಿ. ತಿಮ್ಮಾಪುರ್‌ರಾಜೀನಾಮೆ ಆಗ್ರಹಿಸಿ, ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು NDA ಮಿತ್ರಪಕ್ಷವಾದ ಜೆಡಿಎಸ್‌ಬಿಜೆಪಿ ಶಾಸಕರು ಜಂಟಿಯಾಗಿ ಪ್ರತಿಭಟನೆ ನಡೆಸಿ, ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದರು.

- Advertisement - 

ಈ ಸಂದರ್ಭದಲ್ಲಿ  ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು ಸಿ.ಬಿ., ವಿಧಾನ ಪರಿಷತ್‌ಶಾಸಕಾಂಗ ಪಕ್ಷದ ನಾಯಕರಾದ ಎಸ್‌.ಎಲ್‌. ಭೋಜೇಗೌಡ, ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ಅವರು, ವಿಧಾನ ಪರಿಷತ್‌ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಶಾಸಕರು, ವಿಧಾನ ಪರಿಷತ್‌ಸದಸ್ಯರು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";