ಚಂದ್ರವಳ್ಳಿ ನ್ಯೂಸ್, ಚಿಕ್ಕಬಳ್ಳಾಪುರ:
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡನನ್ನು ಪೊಲೀಸ್ ಬಂಧಿಸಿದ್ದಾರೆ.
ಕಳೆದ 14 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡನನ್ನು ಕೇರಳ ಗಡಿಯಲ್ಲಿ ಬಂಧಿಸುವಲ್ಲಿ ಶಿಡ್ಲಘಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್ ನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಈ ಸಂಬಂಧ ಸುದ್ದಿಗೋಷ್ಠಿ ಮಾತನಾಡಿ, ಪ್ರಕರಣದ ಪ್ರಮುಖ ಆರೋಪಿ ರಾಜೀವ್ ಗೌಡನನ್ನು ಕೇರಳದಲ್ಲಿ ಬಂಧಿಸಲಾಗಿದೆ. ರಾಜೀವ್ ಗೌಡ ಜೊತೆಗಿದ್ದ ಮೈಕಲ್ನನ್ನೂ ಬಂಧಿಸಲಾಗಿದೆ. ಆರೋಪಿ ಬಂಧನಕ್ಕೆ 3 ಪೊಲೀಸರ ತಂಡವನ್ನು ರಚಿಸಲಾಗಿತ್ತು. ವಿವಿಧ ಜಿಲ್ಲೆಗಳ ಪೊಲೀಸರ ಸಹಕಾರದೊಂದಿಗೆ ತನಿಖೆ ನಡೆಸಲಾಗಿತ್ತು.
ಮಂಗಳೂರಿನಿಂದ ಕೇರಳಕ್ಕೆ ಹೋಗಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿತ್ತು. ಕಾರಿನಲ್ಲಿ ಪರಾರಿಯಾಗಿದ್ದ ರಾಜೀವ್ ಗೌಡ ಕಾರನ್ನು ಫಾಲೋ ಮಾಡಿ ಇಬ್ಬರನ್ನು ಬಂಧಿಸಲಾಗಿದೆ.
ಪೊಲೀಸರಿಂದ ಯಾವುದೇ ವಿಷಯಗಳು, ಮಾಹಿತಿ ಸೋರಿಕೆ ಆಗಿಲ್ಲ. ನಮ್ಮ ಪೊಲೀಸರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಪೊಲೀಸರಿಂದ ಯಾವುದೇ ನಿರ್ಲಕ್ಷ್ಯ ಆಗಿಲ್ಲ ಎಂದು ಎಸ್ಪಿ ಅವರು ಹೇಳಿದರು.

