ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನಿಧನಕ್ಕೆ ಸಿಎಂ ಸಂತಾಪ

News Desk
- Advertisement -  - Advertisement -  - Advertisement - 

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ದುರದೃಷ್ಟಕರ ನಿಧನವು ಅತ್ಯಂತ ಆಘಾತಕಾರಿ ಮತ್ತು ದುಃಖದಾಯಕವಾಗಿದೆ.

ಅವರ ಅಗಲಿಕೆಯು ಸಾರ್ವಜನಿಕ ಜೀವನಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗದವರಿಗೆ, ಸಹೋದ್ಯೋಗಿಗಳಿಗೆ ಮತ್ತು ಬೆಂಬಲಿಗರಿಗೆ ಮತ್ತು

- Advertisement - 

ಅವರ ಪ್ರೀತಿಪಾತ್ರರಿಗೆ ಅಗಲಿಕೆಯ  ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement - 
Share This Article
error: Content is protected !!
";