ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ಆದರ್ಶ ವಿದ್ಯಾಲಯ ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳಲ್ಲಿ 6ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಈಗಾಗಲೇ ಜನವರಿ 23 ರಿಂದ ಪ್ರಾರಂಭವಾಗಿದ್ದು, ಫೆ.25 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷೆಗೆ ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 5ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು www.schooleducation.kar.nic.in ಮತ್ತು www.vidyavahini.karnataka.gov.in ವೆಬ್‍ಪುಟಗಳ ಮೂಲಕ ಅರ್ಜಿ ಸಲ್ಲಿಸಬಹುದು.
ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳ ಖಾಯಂ ನಿವಾಸಿಗಳ ಮಕ್ಕಳು ಬೇರೆ ತಾಲ್ಲೂಕು, ಜಿಲ್ಲೆ, ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೂ ಸಹ 6ನೇ ತರಗತಿಯಿಂದ ಮೂಲ ತಾಲ್ಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಛಿಸಲು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಡಿಡಿಪಿಐ (ಆಡಳಿತ)/ಅಭಿವೃದ್ಧಿ, ಬಿಇಒ/ಬಿಆರ್‍ಸಿ ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕು, ಮುಖ್ಯ ಶಿಕ್ಷಕರು, ಆದರ್ಶ ವಿದ್ಯಾಲಯ ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕು ಇವರನ್ನು ಸಂಪರ್ಕಿಸಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ತಿಳಿಸಿದ್ದಾರೆ.

