ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿವಿಧ ಇಲಾಖೆಗಳಲ್ಲಿ 28,000 ಸರ್ಕಾರಿ ಹುದ್ದೆಗಳು ಖಾಲಿಯಿದ್ದರೂ ಭ್ರಷ್ಟ ಕಾಂಗ್ರೆಸ್ ಸರ್ಕಾರ ಭರ್ತಿಗೆ ಕ್ರಮ ವಹಿಸದೆ ಉದ್ಯೋಗಾಕಾಂಕ್ಷಿಗಳಿಗೆ ದ್ರೋಹ ಬಗೆದಿದೆ. ಇದು ಸರ್ಕಾರದ ಅಸಮರ್ಥತೆಯಲ್ಲ ಬದಲಿಗೆ ಉದ್ದೇಶಪೂರ್ವಕ ಕಡೆಗಣನೆ.! ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ತುಘಲಕ್ಆಡಳಿತ ನಡೆಸುತ್ತಿರುವ ಕಾಂಗ್ರೆಸ್ಸರ್ಕಾರಕ್ಕೆ ಖಾಲಿ ಹುದ್ದೆಗಳ ಭರ್ತಿ ಮಾಡುವುದಕ್ಕೆ ದುಡ್ಡಿಲ್ಲ, ಯುವಕರ ಭವಿಷ್ಯ ರೂಪಿಸುವುದಕ್ಕೆ ಮನಸ್ಸಿಲ್ಲ.
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 462 ಹುದ್ದೆಗಳು ಖಾಲಿಯಿದ್ದರೂ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೌನ ವಹಿಸುವ ಮೂಲಕ ಯುವಕರ ಭವಿಷ್ಯಕ್ಕೆ ಕಲ್ಲು ಹಾಕಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
ಸಿಎಂ ಸಿದ್ದರಾಮಯ್ಯ ನವರೇ ಕೂಡಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಿ, ಯುವಕರ ಸರ್ಕಾರಿ ಕೆಲಸದ ಕನಸಿಗೆ ನೆರವಾಗಿ ಎಂದು ಬಿಜೆಪಿ ತಾಕೀತು ಮಾಡಿದೆ.

