ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಲೆನಾಡು, ಕರಾವಳಿ ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಎಲೆಚುಕ್ಕಿ ಕೀಟ ಬಾಧೆ ಎದುರಾಗಿದ್ದು, ಅಂದಾಜು 88,559 ಹೆಕ್ಟೇರ್ ಪ್ರದೇಶದಲ್ಲಿ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.
ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಬೆಳೆಗಾರರಿಗೆ ಶೀಘ್ರವಾಗಿ ಸೂಕ್ತ ಪರಿಹಾರ ನೀಡಬೇಕು. ತರಬೇತಿ, ಕಾರ್ಯಾಗಾರಗಳ ಮೂಲಕ ರೋಗದ ಕುರಿತು ರೈತರಿಗೆ ಅರಿವು ಮೂಡಿಸಬೇಕು.
ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಹಳದಿ ಮತ್ತು ಎಲೆಚುಕ್ಕಿ ರೋಗ ನಿರ್ಮೂಲನೆಗೆ ಸರ್ಕಾರ ತ್ವರಿತ ಕ್ರಮವನ್ನು ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.

