ಪೊಲೀಸರಿಗೆ ಸಿಹಿ ಸುದ್ದಿ ನೀಡಿದ ಪೊಲೀಸ್​ ಮಹಾ ನಿರ್ದೇಶಕ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಪೊಲೀಸ್ ಇಲಾಖೆಯ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ಕೋರಿದರೆ ಕಡ್ಡಾಯವಾಗಿ ಮಂಜೂರು ಮಾಡಬೇಕು ಎಂದು ಪೊಲೀಸ್​ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಎಲ್ಲಾ ಘಟಕಾಧಿಕಾರಿಗಳಿಗೆ ಆದೇಶ ನೀಡಿ ಸಹಿ ಸುತ್ತಿ ನೀಡಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿ ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿರುತ್ತದೆ.

- Advertisement - 

ಅಂಥ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚೇತನಗೊಳ್ಳಲು ಹಾಗೂ ಕುಟುಂಬದೊಂದಿಗೆ ಸಮಯ ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಲು ಸಹಾಯವಾಗುತ್ತದೆ.

ಇದರಿಂದ ಸಿಬ್ಬಂದಿಯ ಮನೋಬಲ ವೃದ್ಧಿಯಾಗಿ, ಒತ್ತಡ ಕಡಿಮೆಯಾಗುತ್ತದೆ. ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜತೆಗೆ ನಿಷ್ಠೆಯನ್ನು ಬೆಳೆಸುತ್ತದೆ. ಪೊಲೀಸ್ ಪಡೆಯ ಬದ್ಧತೆ ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ಷಮತೆಗೆ ಸಹಕಾರಿಯಾಗುತ್ತದೆ.

- Advertisement - 

ಆದ್ದರಿಂದ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ತಪ್ಪದೆ ರಜೆ ಮಂಜೂರು ಮಾಡಬೇಕು ಎಂದು ಘಟಕಾಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದ್ದಾರೆ.

Share This Article
error: Content is protected !!
";