ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಫೆಬ್ರವರಿ 1 ರಂದು ಭಾನುವಾರ ನಡೆಯಲಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳು ನೊಂದಣಿ ಮಾಡಿಕೊಳ್ಳುವ ನೀಡಿದ್ದ ಕ್ಯೂ.ಆರ್.ಕೋಡ್‌ನಲ್ಲಿ ತಾಂತ್ರಿಕ ಸಮಸ್ಯೆಯಾಗಿದೆ. ಈ ಹಿನ್ನಲೆಯಲ್ಲಿ ಹೊಸ ಕ್ಯೂ.ಆರ್.ಕೋಡ್ ಸೃಜಿಸಲಾಗಿದೆ.
ಅಭ್ಯರ್ಥಿಗಳು ಜಿಲ್ಲಾ ಅಧಿಕೃತ ವೆಬ್ ಸೈಟ್ https://chitradurga.nic.in/en/ ಮೂಲಕ ಗೂಗಲ್ ಫಾರಂ ಲಿಂಕ್ https://forms.gle/hHQmNYk4uBRSV9FeA ಅಥವಾ ಹೊಸ ಕ್ಯೂ ಆರ್ ಕೋಡ್ ಬಳಸಿ ನೊಂದಣಿ ಮಾಡಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
ಫೆ.1 ರಂದು ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಬೆಳಿಗ್ಗೆ 9:30 ರಿಂದ ಪ್ರಾರಂಭವಾಗುವ ಉದ್ಯೋಗ ಮೇಳದಲ್ಲಿ ರಾಜ್ಯದ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಬಿ.ಇ. ಹಾಗೂ ಯಾವುದೇ ಪದವಿ ಹೊಂದಿರುವ 18 ರಿಂದ 35 ವರ್ಷದೊಳಗಿನ ಪುರುಷ, ಮಹಿಳಾ ಹಾಗೂ ವಿಕಲಚೇತನ ಅಭ್ಯರ್ಥಿಗಳು ಭಾಗವಹಿಸಬಹುದು. ನೊಂದಣಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಅಭ್ಯರ್ಥಿಗಳು ಕನಿಷ್ಠ 5 ಬಯೋಡೇಟಾ ಪ್ರತಿ ಆಧಾರ್ ಕಾರ್ಡ್ನ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂ ಘಟಕ, ತಾಲ್ಲೂಕು ಪಂಚಾಯತ್ ಕಚೇರಿ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

